ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಶುಕ್ರವಾರ ಹೊಸದಾಗಿ ನೇಮಕಗೊಂಡ ಯುಕೆ ಪ್ರಧಾನಿ ರಿಷಿ ಸುನಕ್ ( UK Prime Minister Rishi Sunak ) ಅವರೊಂದಿಗೆ ಮಾತನಾಡಿ, ಯುಕೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು. ಇಬ್ಬರೂ ನಾಯಕರು ಭಾರತ ಮತ್ತು ಯುಕೆ ನಡುವಿನ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತನಾಡಿದರು. ಮುಕ್ತ ವ್ಯಾಪಾರ ಒಪ್ಪಂದವನ್ನು (Free Trade Agreement – FTA) ಸಾಧ್ಯವಾದಷ್ಟು ಬೇಗ ಮುಗಿಸಲು ಒಪ್ಪಿಕೊಂಡರು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ರಲ್ಲಿ ತಿದ್ದುಪಡಿಗಾಗಿ ಮಾಡಲಾದ ಶಿಫಾರಸ್ಸು ಸರಕಾರಕ್ಕೆ ಸಲ್ಲಿಕೆ
ಈ ಕುರಿತಂತೆ ಟ್ವಿಟ್ ಮಾಡಿ, ಮಾಹಿತಿ ಹಂಚಿಕೊಂಡಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಇಂದು ರಿಷಿ ಸುನಕ್ ಅವರೊಂದಿಗೆ ಮಾತನಾಡಲು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದೆನು. ನಮ್ಮ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಸಮಗ್ರ ಮತ್ತು ಸಮತೋಲಿತ ಎಫ್ಟಿಎಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವ ಪ್ರಾಮುಖ್ಯತೆಯ ಬಗ್ಗೆಯೂ ನಾವು ಒಪ್ಪಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.
Glad to speak to @RishiSunak today. Congratulated him on assuming charge as UK PM. We will work together to further strengthen our Comprehensive Strategic Partnership. We also agreed on the importance of early conclusion of a comprehensive and balanced FTA.
— Narendra Modi (@narendramodi) October 27, 2022
ಬ್ರಿಟನ್ ಪ್ರಧಾನಿ ರಿಶಿ ಸುನಕ್ ಅವರು ಪ್ರಧಾನಿ ಮೋದಿ ಅವರ ದಯಾಪರ ಮಾತುಗಳಿಗೆ ಧನ್ಯವಾದ ಅರ್ಪಿಸಿದರು ಮತ್ತು ಎರಡು ಪ್ರಜಾಪ್ರಭುತ್ವಗಳ ಭವಿಷ್ಯದ ಪ್ರಯತ್ನಗಳ ಬಗ್ಗೆ ಉತ್ಸುಕತೆಯನ್ನು ವ್ಯಕ್ತಪಡಿಸಿದರು.
ಶಿವಮೊಗ್ಗ: ಜಿಲ್ಲೆಯಲ್ಲಿ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ಯಶಸ್ವಿಗೆ ಕ್ರಮ – ಜಿಲ್ಲಾಧಿಕಾರಿ ಡಾ.ಸೆಲ್ವಮಣಿ