ಬೆಂಗಳೂರು: ಕರ್ನಾಟಕದಲ್ಲಿರುವ ಸುಮಾರು 200 ಅರೇಬಿಕ್ ಶಾಲೆಗಳಿಂದ ಶಿಕ್ಷಣ ಇಲಾಖೆ ನಿಯಮ ಉಲ್ಲಂಘಿಸಿದ್ದಕ್ಕೆ ಶಾಲೆಗಳು ಸ್ಥಿತಿಗತಿ ಕುರಿತು ಶೀಘ್ರವೇ ಸಮಗ್ರ ವರದಿ ಸಲ್ಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸೂಚನೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು,‘ಅರೇಬಿಕ್ ಶಾಲೆಗಳನ್ನು ನಿಯಮಗಳಿಗೆ ಅನುಸಾರವಾಗಿ ನಡೆಸುತ್ತಿಲ್ಲ. ಭಾಷೆ ಮತ್ತು ವಿಜ್ಞಾನದ ಕಲಿಕೆಯೂ ಸಮರ್ಪಕ ರೀತಿಯಲ್ಲಿ ಇಲ್ಲ. ಈ ಬಗ್ಗೆ ಹಲವರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಮಗ್ರವಾಗಿ ಪರಿಶೀಲಿಸುವಂತೆ ಆಯುಕ್ತರಿಗೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.ಮದರಸಾಗಳಲ್ಲಿ ಕೆಲವೇ ಶಾಲೆಗಳು ಇಲಾಖೆಗಳು ಸೂಚಿಸಿರುವ ಪಠ್ಯಕ್ರಮ ಅನುಸರಿಸುತ್ತಿವೆ.
ಆದರೆ ಬಹುತೇಕ ಶಾಲೆಗಳು ಶಿಕ್ಷಣ ಇಲಾಖೆ ಸೂಚನೆಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಶಾಲೆಗಳಲ್ಲಿ ಎಷ್ಟರಮಟ್ಟಿಗೆ ಇಲಾಖೆಯ ಸೂಚನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎನ್ನುವುದನ್ನು ಸಮೀಕ್ಷೆಯ ವೇಳೆ ಪರಿಶೀಲಿಸಲಾಗುವುದು’ ಎಂದರು.