ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲೆಯ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಮತ್ತು ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಅವರು ಸೇರಿದ್ದ ಸಮೂಹದ ಜೊತೆ ಕನ್ನಡದ ಗೀತೆಗಳನ್ನು ಹಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆದಿದೆ.
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿ ಟಿ ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಸಿ ಟಿ ರವಿ, ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಕಾಫಿನಾಡು ಚಂದು ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದು, ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೋಟಿ ಕಂಠ ಗಾಯನ ಮೊಳಗಿದೆ.ಜಿಲ್ಲಾ ಆಟದ ಮೈದಾನದಲ್ಲಿ ಕೋಟಿ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು ವಿಶೇಷವಾಗಿತ್ತು.