ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ವಿಚಾರಕ್ಕೆ ಹಲವು ವಿಘ್ನಗಳು ಬರುತ್ತದೆ, ಆದರೆ ಪುನೀತ್ ವಿಚಾರದಲ್ಲಿ ಹಾಗೆ ಆಗೋಲ್ಲ, ನಟ ಪುನೀತ್ ಹಲವು ಸಾಧನೆ , ಸಮಾಜಮುಖಿ ಕೆಲಸ ಮಾಡಿದ್ದಾರೆ. ಪುನೀತ್ ಜೀವನ ಸಾಧನೆ ಪಠ್ಯದಲ್ಲಿ ಸೇರಬೇಕು, ಈ ಬಗ್ಗೆ ಸಿಎಂ, ಶಿಕ್ಷಣ ಸಚಿವರು ತೀರ್ಮಾನ ಕೈಗೊಳ್ಳಲಿದ್ದಾರೆ. ಮುಂದಿನ ವರ್ಷ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷವೇ ಕಳೆದಿದೆ. ಆದರೂ ಕೂಡ ಅಭಿಮಾನಿಗಳಿಗಂತೂ ಇನ್ನೂ ನೆನಪು ಹಾಗೆ ಉಳಿದಿದೆ.ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿಮಾನಿಗಳು ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ಡಾ. ರಾಜ್ ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೆ ರೀತಿ ನಟ ಪುನೀತ್ ರಾಜ್ ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.
ವಯಸ್ಕರಂತಹ ವಿಚಾರಣಾ ನಿರ್ದೇಶನದ ನಂತ್ರವೂ ‘ಬಾಲಾಪರಾಧಿ’ಗಳು ಜೆಜೆ ಕಾಯ್ದೆಯ ಪ್ರಯೋಜನ ಪಡೆಯಲು ಅರ್ಹರು ; ಹೈಕೋರ್ಟ್
BIGG NEWS: ಇಂದು ಅಪ್ಪು ಪುಣ್ಯಸ್ಮರಣೆ; ಅಭಿಮಾನಿಗಳಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ
BIGG NEWS : 86 ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ರಾಜ್ಯ ಸರ್ಕಾರದಿಂದ 20 ಕೋಟಿ ರೂ.ಅನುದಾನ ಬಿಡುಗಡೆ