ಬೆಂಗಳೂರು : ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.
ರೇಸ್ ಕೋರ್ಸ್ ಬಳಿ ಸರ್ಕಾರಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂಈ, ಸಮಾರಂಭಕ್ಕೆ ದಕ್ಷಿಣ ಭಾರತದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭಕ್ಕೆ ಇಬ್ಬರು ಸ್ಟಾರ್ ನಟು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅವರಿಗೆ ಕರ್ನಾಟಕ ಸರಕಾರವು ಆಹ್ವಾನ ನೀಡಿದ್ದು, ಜ್ಯೂನಿಯರ್ ಎನ್.ಟಿ.ಆರ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ ಎಂದು ಹೇಳಿದ್ದಾರೆ.
‘ಅಪ್ಪು’ ಪುಣ್ಯಸ್ಮರಣೆ ದಿನ ರಾಜ್ಯದ ಹಲವೆಡೆ ಅನ್ನದಾನ : ಬಿರಿಯಾನಿ ಹಂಚಿದ ‘ಪುನೀತ್’ ಫ್ಯಾನ್ಸ್ |Puneeth Rajkumar