ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಮತ್ತೆ ಆರಂಭವಾಗಿದೆ.
ಗೋಪಾಲಸ್ವಾಮಿ ಬೆಟ್ಟದ ರಸ್ತೆ ದುರಸ್ಥಿ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ 13 ದಿನಗಳ ಬಳಿಕ ಮತ್ತೆ ಆರಂಭಗೊಂಡಿದೆ.ನಿರಂತರ ಮಳೆಯಿಂದಾಗಿ ಬೆಟ್ಟಕ್ಕೆ ಹೋಗುವ ರಸ್ತೆಗಳಲ್ಲಿ ಕೊರಕಲು ಉಂಟಾಗಿರುವ ಹಿನ್ನಲೆಯಲ್ಲಿ ರಸ್ತೆ ಬದಿಗಳಲ್ಲಿ ಮಣ್ಣುಕೊಚ್ಚಿಕೊಂಡು ಹೋಗಿತ್ತು, ಈ ಹಿನ್ನಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು,
ಹಿಮವದ್ ಗೋಪಾಲಸ್ವಾಮಿ ಬೆಟ್ಟ ವು ಬಂಡೀಪುರ ರಾಷ್ಟ್ರೀಯ ಉದ್ಯಾನದ ಅತಿ ಎತ್ತರದ ಶಿaಖರವಾಗಿದೆ. ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ಬಳಿ ಇರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಹಚ್ಚ ಹಸಿರಿನಿಂದ ಕೂಡಿದ ನೈಸರ್ಗಿಕ ಪರಿಸರದಿಂದಾಗಿ ಪ್ರವಾಸಿಗರನ್ನು ಆಕರ್ಷಿಸುತ್ತದೆ.
ವೇಣುಗೋಪಾಲಸ್ವಾಮಿ ದೇವಸ್ಥಾನ: 14 ನೇ ಶತಮಾನದಲ್ಲಿ ಅಗಸ್ತ್ಯ ಋಷಿ ನಿರ್ಮಿಸಿದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಭಗವಾನ್ ಕೃಷ್ಣ (ವೇಣುಗೋಪಾಲ ಸ್ವಾಮಿ) ನೃತ್ಯದ ಭಂಗಿಯಲ್ಲಿ ನಿಂತು ತನ್ನ ಕೈಯಲ್ಲಿ ಕೊಳಲು ನುಡಿಸುವ ವಿಗ್ರಹವಿದೆ. ವಿಗ್ರಹದ ಹಿಂದಿನ ಫಲಕವು ಕೃಷ್ಣನ ಪತ್ನಿಯರಾದ ಸತ್ಯಭಾಮ, ರುಕ್ಮಿಣಿ ಮತ್ತು ನೆಚ್ಚಿನ ಪ್ರಾಣಿ ಹಸು ಮತ್ತು ಗೋಪಾಲಕರ ಕೆತ್ತನೆಗಳನ್ನು ಒಳಗೊಂಡಿದೆ.
Vastu Tips: ನೀವು ಯಾವ ದಿಕ್ಕಿನಲ್ಲಿ ಕುಳಿತು ಊಟ ಸೇವಿಸುತ್ತೀರಿ..? ವಾಸ್ತು ತಜ್ಞರ ಸಲಹೆಗಳು