ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ನವೆಂಬರ್ ಮೊದಲ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ., ಚಿತ್ರದುರ್ಗ, ಚಾಮರಾಜನಗರ. ಬೇಲೂರು, ಹಾಸನ, ಕೊಡಗು,ಕೋಲಾರ. ಮೈಸೂರು. ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಕೆಲವು ಕಡೆ ಜಿಟಿಜಿಟಿ ಮಳೆಯಿರಲಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.