ಬೆಂಗಳೂರು: ಕರ್ತವ್ಯ ಲೋಪದ ಆರೋಪದಡಿ ಕಳೆದ ವಾರ ಸಸ್ಪೆಂಡ್ ಆಗಿದ್ದ ಕೆಆರ್ಪುರ ಇನ್ಸ್ಪೆಕ್ಟರ್ ನಂದೀಶ್ (Inspector Nandish) ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ನಂದೀಶ್ ಸಾವು ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ಲಕ್ಷ ಲಕ್ಷ ನೀಡಿ ಎರಡು ತಿಂಗಳ ಹಿಂದೆ ಕೆಆರ್ಪುರಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿದ್ರು. ಆದ್ರೆ ದಿಢೀರ್ ಅಮಾನತು ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ರು. ಪೋಸ್ಟಿಂಗ್ ವಾಪಸ್ ಕೊಡಿಸಿ ಎಂದು ಹಲವರ ದುಂಬಾಲು ಬಿದ್ದಿದ್ರು ಪ್ರಯೋಜನ ಆಗಿರಲಿಲ್ಲ ಎಂಬ ಮಾತು ಹರಿದಾಡುತ್ತಿವೆ. ಇದಕ್ಕೆ ಪೂರಕ ಎಂಬಂತೆ ಸಚಿವ ಎಂಟಿಬಿ ನಾಗರಾಜ್ (MTB Nagaraj), ಪೋಸ್ಟಿಂಗ್ಗೆ 60-70 ಲಕ್ಷ ರೂ. ಕೊಟ್ಟು ಬಂದ್ರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ ಎಂದು ಹೇಳಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಸಚಿವರ ಹೇಳಿಕೆ ರಾಜ್ಯ ಸರ್ಕಾರಕ್ಕೆ ದೊಡ್ಡ ಸಂಕಷ್ಟ ಎದುರಾಗಲಿದ್ಯಾ ಎಂಬ ಪ್ರಶ್ನೆ ಕಾಡಿದೆ. ನಂದೀಶ್ ಸಾವು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.
ಕೆಆರ್ಪುರ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ನಂದೀಶ್ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಇದೀಗ ಇನ್ಸ್ಪೆಕ್ಟರ್ ಸಾವಿಗೆ ಪೋಸ್ಟಿಂಗ್ಗಾಗಿ ಲಂಚದ ಆರೋಪ ಕೇಳಿಬಂದಿದೆ. ಅವಧಿ ಮೀರಿ ಪಬ್ ಓಪನ್ ಮಾಡಲು ಅವಕಾಶ ಕೊಟ್ಟಿದ್ದಾರೆ ಅಂತಾ ಅಮಾನತು ಶಿಕ್ಷೆ ವಿಧಿಸಲಾಗಿತ್ತು. ಕೇವಲ ಎರಡು ತಿಂಗಳ ಹಿಂದಷ್ಟೆ ಕೆಆರ್ಪುರ ಇನ್ಸ್ಪೆಕ್ಟರ್ ಆಗಿ ನಂದೀಶ್ ವರ್ಗಾವಣೆಯಾಗಿದ್ರು. ಅಮಾನತು ಶಿಕ್ಷೆಗೆ ನಂದೀಶ್ ಮಾನಸಿಕವಾಗಿ ಕುಗ್ಗಿಹೋಗಿದ್ರಂತೆ. ವಾಪಸ್ ಪೋಸ್ಟಿಂಗ್ ಕೊಡಿಸುವಂತೆ ಕೆಲ ನಾಯಕರ ಬೆನ್ನು ಬಿದ್ದಿದ್ರು ಅಂತಾ ಮಾತುಗಳು ಕೇಳಿ ಬರುತ್ತಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!!ಬೊಮ್ಮಾಯಿ ಅವರೇ ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎನುವುದನ್ನು ಸ್ವತಃ ಸರಕಾರವೇ ಒಪ್ಪಿಕೊಂಡಂತೆ ಆಗಿದೆ. ಪೋಸ್ಟಿಂಗ್ ಗೆ 70-80 ಲಕ್ಷ ರೂ. ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ಎಂದು ಹೇಳಿರುವ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಯು ಈ ಸರಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ ಎಂದಿದ್ದಾರೆ.
ಸಚಿವರೇ ಹೇಳಿದಂತೆ 70-80 ಲಕ್ಷ ರೂ.ಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿಎಂ ಸಾಹೇಬರೇ ಎಂದು ವಾಗ್ಧಾಳಿ ನಡೆಸಿದ್ದಾರೆ.
ಬಿಜೆಪಿ ಸರಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಹೈಕಮಾಂಡ್ ಏಜೆಂಟ್ ರಂತೆ ವರ್ತಿಸುತ್ತಿರುವ ಉತ್ತರ ಭಾರತದ ಕೆಲ ಹಿರಿಯ ಹಿಂದಿ ಪೊಲೀಸ್ ಅಧಿಕಾರಿಗಳು, ಕನ್ನಡ ಅಧಿಕಾರಿಗಳನ್ನು ಗುಲಾಮರಂತೆ ನೋಡುತ್ತಿದ್ದಾರೆ. ನಮ್ಮ ಕಿರಿಯ ಮಟ್ಟದ ಅಧಿಕಾರಿಗಳು ಅವರಿಗೆ ಊಳಿಗ ಮಾಡುವಂಥ ಸ್ಥಿತಿ ಇದೆ
ಅಲ್ಲದೆ, ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ.., ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.
ಅಲ್ಲದೆ, ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ.., ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ.7/7#CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022
BREAKING NEWS : ಅರ್ಹ ಹಿರಿಯ ಸಾಹಿತಿ, ಕಲಾವಿದರಿಗೆ ‘ಮಾಸಾಶನ’ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ