ನವದೆಹಲಿ: ರಾಷ್ಟ್ರೀಯ ರಾಜಧಾನಿಯಲ್ಲಿ ಹದಗೆಡುತ್ತಿರುವ ವಾಯು ಗುಣಮಟ್ಟ(air quality) ಹಿನ್ನೆಲೆಯಲ್ಲಿ ಎನ್ಸಿಆರ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆ ಆಯೋಗ (ಸಿಎಕ್ಯೂಎಂ) ಶನಿವಾರ ನಿರ್ಮಾಣ ಕಾರ್ಯಗಳಿಗೆ ಸಂಬಂಧಿಸಿದ ಚಟುವಟಿಕೆಗಳ ಮೇಲೆ ನಿಷೇಧ ಹೇರಿದೆ.
ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಉಪಸಮಿತಿಯು ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವುದನ್ನು ತಡೆಯುವ ಕ್ರಮದಲ್ಲಿ ಇಡೀ NCR ನಲ್ಲಿ GRAP ಯ ಹಂತ III ಅನ್ನು ಜಾರಿಗೆ ತರಲು ನಿರ್ಧರಿಸಿದೆ. ಇದರ ಅಡಿಯಲ್ಲಿ, ಸೆಂಟ್ರಲ್ ವಿಸ್ಟಾದಂತಹ ವಿಶೇಷ ಯೋಜನೆಗಳು ಮತ್ತು ರಾಷ್ಟ್ರೀಯ ಅಗತ್ಯದ ಇತರ ಯೋಜನೆಗಳನ್ನು ಹೊರತುಪಡಿಸಿ ಎಲ್ಲಾ ನಿರ್ಮಾಣ ಕಾರ್ಯಗಳನ್ನು ನಿಷೇಧಿಸಲಾಗುವುದು” ಎಂದು ಎನ್ಸಿಆರ್ ಮತ್ತು ಪಕ್ಕದ ಪ್ರದೇಶಗಳಲ್ಲಿನ ವಾಯು ಗುಣಮಟ್ಟ ನಿರ್ವಹಣೆಯ ಆಯೋಗದ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
ದೆಹಲಿಯಲ್ಲಿ ಹದಗೆಡುತ್ತಿರುವ ವಾಯು ಗುಣಮಟ್ಟವನ್ನು ಪರಿಹರಿಸಲು, NCR ಮತ್ತು ಪಕ್ಕದ ಪ್ರದೇಶಗಳಲ್ಲಿ CAQM ನ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕ್ರಮಗಳನ್ನು ಕೈಗೊಳ್ಳಲು ಉಪಸಮಿತಿ ತುರ್ತು ಸಭೆಯನ್ನು ನಡೆಸಿ, ಈ ತೀರ್ಮಾನ ಕೈಗೊಂಡಿದೆ.
Yashaswini Yojana : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ: ಇಲ್ಲಿದೆ ʻನವೆಂಬರ್’ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ