ಗುಜರಾತ್: ದೇಶದಲ್ಲಿ ಉದ್ಯೋಗಾವಕಾಶಗಳನ್ನು ಸುಧಾರಿಸಲು ಕೇಂದ್ರ ಸರ್ಕಾರವು ಹತ್ತು ಲಕ್ಷ ಉದ್ಯೋಗಗಳನ್ನು ಒದಗಿಸಲು ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ತಿಳಿಸಿದ್ದಾರೆ.
ಶನಿವಾರ ಗುಜರಾತ್ನ ರೋಜ್ಗಾರ್ ಮೇಳದ ವೀಡಿಯೊ ಸಂದೇಶದಲ್ಲಿ ಮಾತನಾಡಿದ ಮೋದಿ ಅವರು, “ಕೇಂದ್ರ ಸರ್ಕಾರವು ಹತ್ತು ಲಕ್ಷ ಉದ್ಯೋಗಗಳನ್ನು ಒದಗಿಸಲು ಕೆಲಸ ಮಾಡುತ್ತಿದೆ. ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಹ ಅಭಿಯಾನದೊಂದಿಗೆ ಸಂಬಂಧ ಹೊಂದುತ್ತಿವೆ. ಯುವಕರಿಗೆ ನೀಡುವ ಸರ್ಕಾರಿ ಉದ್ಯೋಗಗಳ ಸಂಖ್ಯೆ ಗಣನೀಯವಾಗಿ ಏರುತ್ತದೆ” ಎಂದಿದ್ದಾರೆ.
“2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಮುಂದಿನ 25 ವರ್ಷಗಳು ದೇಶಕ್ಕೆ ಬಹಳ ನಿರ್ಣಾಯಕವಾಗಿದೆ. ನಮಗೆ ಸಾಕಷ್ಟು ಅಭಿವೃದ್ಧಿ ಬೇಕು ಮತ್ತು ಸಮಾಜ ಮತ್ತು ದೇಶಕ್ಕಾಗಿ ನಿಮ್ಮ ಕರ್ತವ್ಯವನ್ನು ನೀವು ಪೂರೈಸಬೇಕು” ಎಂದರು.
ಈ ಸಂದರ್ಭದಲ್ಲಿ ಗುಜರಾತ್ ಪಂಚಾಯತ್ ಸೇವಾ ಮಂಡಳಿಯಿಂದ ಸುಮಾರು 5,000 ಮಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು. ಇದರೊಂದಿಗೆ ಗುಜರಾತ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಮಂಡಳಿ ಮತ್ತು ಲೋಕರಕ್ಷಕ ನೇಮಕಾತಿ ಮಂಡಳಿಯಿಂದ 8,000 ಮಂದಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಸರ್ಕಾರವು ಬಹು ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿದೆ ಎಂಬುದು ಗಮನಿಸಬೇಕಾದ ಸಂಗತಿ.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ: ಇಲ್ಲಿದೆ ʻನವೆಂಬರ್’ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ