ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ರಸ್ತೆ ಗುಂಡಿಯನ್ನು ತಪ್ಪಿಸಲು ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಲ್ಟಿಯಾದ ಕಾರಿಗೆ ಎದುರು ಬಂದ ಬೈಕ್ ಡಿಕ್ಕಿಯಾಗಿ ಹೊಡೆದು ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
BIGG NEWS : ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಗಿಫ್ಟ್ ವಿಚಾರ ; ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?