ಮೊಗಾದಿಶು(ಸೊಮಾಲಿಯಾ): ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಶಿಕ್ಷಣ ಸಚಿವಾಲಯದ ಹೊರಗೆ ಶನಿವಾರ ಸಂಭವಿಸಿದ ಎರಡು ಕಾರ್ ಬಾಂಬ್ ಸ್ಫೋಟದಲ್ಲಿ 100 ಮಂದಿ ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸೊಮಾಲಿಯಾ ಅಧ್ಯಕ್ಷರು ಇಂದು ಮುಂಜಾನೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಘಟನೆಯು ಮಕ್ಕಳು, ಉದ್ಯಮಿಗಳು ಸೇರಿದಂತೆ ಹಲವು ನಾಗರೀಕರ ಸಾವಿಗೆ ಕಾರಣವಾಗಿದೆ. ಹಿಂಸಾತ್ಮಕ ಉಗ್ರವಾದವನ್ನು ಎದುರಿಸುವ ಬಗ್ಗೆ ಚರ್ಚಿಸಲು ಅಧ್ಯಕ್ಷರು, ಪ್ರಧಾನ ಮಂತ್ರಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆ ನಡೆಸುತ್ತಿದ್ದ ದಿನದಲ್ಲಿ ಮೊಗಾದಿಶುನಲ್ಲಿ ದಾಳಿ ಸಂಭವಿಸಿದೆ. ಐದು ವರ್ಷಗಳ ಹಿಂದೆ 500 ಕ್ಕೂ ಹೆಚ್ಚು ಜನರನ್ನು ಕೊಂದ ಅದೇ ಸ್ಥಳದಲ್ಲಿ ಈ ಬೃಹತ್ ಸ್ಫೋಟ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಘಟನೆಗೆ ಅಲ್-ಖೈದಾ-ಸಂಯೋಜಿತ ಅಲ್-ಶಬಾಬ್ ಕಾರಣ ಎಂದು ಆರೋಪಿಸಿದ್ದಾರೆ.
BREAKING NEWS : ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ
BIGG NEWS : ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಗಿಫ್ಟ್ ವಿಚಾರ ; ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?