ಧಾರವಾಡ : ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
BIG NEWS: ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳಿಂದ ʻಮಹಾತ್ಮ ಗಾಂಧಿʼ ಪ್ರತಿಮೆಗೆ ಹಾನಿ, ಎಫ್ಐಆರ್ ದಾಖಲು
ಶಕುಂತಲಾ ಮನಸೂರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆಗಾಗಿ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಕಳೆದ 20 ವರ್ಷಗಳಿಂದ ಶಕುಂತಲಾ ಕರ್ನಾಟಕ ಮಹರ್ಷಿ ವಾಲ್ಮಿಕಿ ಪಂಗಡದಲ್ಲಿ ಕಿರಿಯ ಸಹಾಯಕಿಯಾಗಿ ಕೆಲಸ ಮಾಡುತಿದ್ದಳು. ಅಧಿಕಾರಿ ರವಿ ಬೆಂತೂರ ನಿರ್ದೇಶಕರಾಗಿ ಬಂದ ಮೇಲೆ ಈಕೆಯ ಮೇಲೆ ಲಂಚ ಪಡೆದ ಆರೋಪ ಮಾಡಿ ನಾಲ್ಕು ತಿಂಗಳ ಹಿಂದೆ ಕೆಲಸದಿಂದ ತೆಗೆದಿದ್ದರು.
ಶನಿವಾರ ಸಚಿವ ಶ್ರೀರಾಮುಲು ಧಾರವಾಡಕ್ಕೆ ಬಂದಾಗ ಮನವಿ ಕೊಡಲು ಶಕುಂತಲಾ ಬಂದಿದ್ದಳು. ಶ್ರೀರಾಮುಲು ಸಿಗದೇ ಇದ್ದಾಗ ಧಾರವಾಡ ಶಾಸಕ ಅರವಿಂದ ಬೆಲ್ಲದ್ ಬಳಿ ಮನವಿ ಕೊಡಲು ಹೋಗಿದ್ದಳು. ಈ ವೇಳೆ ಶಾಸಕರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟರ್ ನಲ್ಲಿ ಕಿಡಿಕಾರಿರುವ ಕಾಂಗ್ರೆಸ್, ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್ನೋಟ್ನಲ್ಲಿ ಸ್ಪಷ್ಟವಾಗಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ? ಎಂದು ಪ್ರಶ್ನಿಸಿದೆ.
BIGG NEWS : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ವಿಚಾರ : ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿ ಪತ್ರ