ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಈ ಬಗ್ಗೆ ಸಚಿವ ಸುನೀಲ್ ಕುಮಾರ್ ಅವರು ಟ್ವಟ್ ಮಾಡಿದ್ದು, ಅವರು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿದ್ದು, ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರಿಗೆ 2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ ಅಂ ತಿಳಿಸಿದ್ದಾರೆ.