ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಕೈಯಲ್ಲಿ ಹಣ ಬಾಚುತ್ತಿಲ್ಲ, ಜೆಸಿಬಿಯಲ್ಲಿ ಹಣ ಬಾಚುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇನ್ ಸ್ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಸಚಿವ ಎಂಟಿಬಿ ನಾಗರಾಜ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಎಂಟಿಬಿ ನಾಗರಾಜ್ ವಿಡಿಯೋ ಜಗತ್ ಜಾಹೀರು ಆಗಿದೆ. ಸರ್ಕಾರದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಬಿಟ್ಟರೆ ಮತ್ಯಾರು ಸರಿಯಿಲ್ಲ, ಎಲ್ಲರೂ ದುಡ್ಡಿನ ದಂಧೆ ಮಾಡಲು ಬಾಗಿಲು ತೆಗೆದುಕೊಂಡು ಕೂತಿದ್ದಾರೆ ಎಂದರು.
ಪೊಲೀಸ್ ಇಲಾಖೆಯಲ್ಲಿ ಭಾರಿ ದೊಡ್ಡ ದಂಧೆ ನಡೆಯುತ್ತಿದೆ. ಹಾಗಾದ್ರೆ ಎಂಟಿಬಿ ಯಾಕೆ ಹಾಗ್ ಹೇಳಿದ್ರು..? ನನಗೆ ಎಲ್ಲವೂ ಗೊತ್ತಿದೆ, ರಾಜ್ಯ ಬಿಜೆಪಿ ಸರ್ಕಾರ ಕೈಯಲ್ಲಿ ಹಣ ಬಾಚುತ್ತಿಲ್ಲ, ಜೆಸಿಬಿಯಲ್ಲಿ ಹಣ ಬಾಚುತ್ತಿದೆ, ಎಲ್ಲಾ ಹಗರಣಗಳ ಬಗ್ಗೆ ಸರ್ಕಾರ ತನಿಖೆ ನಡೆಸಲಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
‘ಹಿಂದುಳಿದ ವರ್ಗಗಳ ಜನರ ಈ ಪರಿ ಬೆಂಬಲ ನೋಡಿದರೆ ನಮ್ಮ ಗೆಲುವು ಖಚಿತ’ : ಸಿಎಂ ಬೊಮ್ಮಾಯಿ |Basavaraj Bommai
40% ಸರ್ಕಾರದ ಭ್ರಷ್ಟಾಚಾರಕ್ಕೆ ಇನ್ನೆಷ್ಟು ಬಲಿ ಬೇಕು? : ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದ ಕಾಂಗ್ರೆಸ್