ಬೆಂಗಳೂರು : ನವೆಂಬರ್ 1 ರ ನಾಳೆ ವಿಧಾನಸೌಧದ ಮುಂಭಾಗ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡುತ್ತಿರುವುದನ್ನು ವೀಕ್ಷಿಸಲು ಸರ್ಕಾರವು ಜನರಿಗೆ 5,000 ಪಾಸ್ ಗಳನ್ನು ವಿತರಿಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
BIG UPDATE: ಗುಜರಾತ್ನಲ್ಲಿ ಕೇಬಲ್ ಸೇತುವೆ ಕುಸಿತ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ಮೇಲ್ವಿಚಾರಣೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಇದಕ್ಕಾಗಿ ಸರ್ಕಾರವು ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಜೂನಿಯರ್ ಎನ್ ಟಿ ಆರ್ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಿದೆ. ಸಂಜೆ 4 ಗಂಟೆಗೆ ಗಾಯಕ ವಿಜಯ್ ಪ್ರಕಾಶ್ ಅವರ ಪ್ರದರ್ಶನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಕರ್ನಾಟಕ ರತ್ನ ಪ್ರಶಸ್ತಿಯು ಸಂಪೂರ್ಣ ಬೆಳ್ಳಿ ಫಲಕ ಮತ್ತು 50 ಗ್ರಾಂ ಚಿನ್ನದ ಪದಕವನ್ನು ಹೊಂದಿರುತ್ತದೆ. ಸರ್ಕಾರವು ಈ ಕಾರ್ಯಕ್ರಮವನ್ನು ಕಂಠೀರವ ಕ್ರೀಡಾಂಗಣದಲ್ಲಿ ನಡೆಸಲು ಬಯಸಿತ್ತು. ಪುನೀತ್ ಅವರ ಕುಟುಂಬದ ಅಪೇಕ್ಷೆಯಂತೆ ವಿಧಾನಸೌಧದ ಮುಂದೆ ಪ್ರಶಸ್ತಿ ನೀಡಲು ನಾವು ನಿರ್ಧರಿಸಿದ್ದೇವೆ. ಈ ಹಿಂದಿನ ಎಲ್ಲಾ ಕರ್ನಾಟಕ ರತ್ನ ಪ್ರಶಸ್ತಿಗಳನ್ನು ವಿಧಾನಸೌಧದಲ್ಲಿ ನೀಡಲಾಯಿತು ಎಂದು ಅವರು ಹೇಳಿದರು.
ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ವಿಧಾನಸೌಧದಲ್ಲಿ ಸಕಲ ತಯಾರಿಗಳು ನಡೆದಿವೆ. ಕಾರ್ಯಕ್ರಮಕ್ಕೆ ಸರ್ಕಾರ ಹಲವು ಗಣ್ಯರಿಗೆ ಆಹ್ವಾನ ನೀಡಿದೆ. ಜೂನಿಯರ್ ಎನ್ಟಿಆರ್ ಅವರು ಕಾರ್ಯಕ್ರಮಕ್ಕೆ ಬರಲು ಒಪ್ಪಿದ್ದಾರೆ. ಈಗ ರಜನಿಕಾಂತ್ ಸಹ ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಈ ಕಾರ್ಯಕ್ರಮವನ್ನು ವೀಕ್ಷಿಸಲು ಪಾಸ್ ಇಲ್ಲದ ಜನರಿಗೆ ಸರ್ಕಾರ ಅವಕಾಶ ನೀಡಲಾಗುತ್ತದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಲ್ಲ ಸಚಿವರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಶೋಕ ತಿಳಿಸಿದರು.