ಬೆಳಗಾವಿ: ನಾಳೆ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆಚರಣೆಗಾಗಿ ಈಗಾಗಲೇ ಸಿದ್ಧತೆ ನಡೆದಿದೆ. ರಾಜ್ಯೋತ್ಸವ ಪ್ರಯುಕ್ತ ಸರ್ಕಾರ ಕೋಟಿ ಕಂಠ ಗಾಯನ ಚಾಲನೆ ನೀಡಿದೆ. ಈ ನಡುವೆಯೇ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ ಮೆರೆಯಲು ಮುಂದಾಗಿದ್ದಾರೆ.
Rain In karnataka : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
ಯಾಕಂದರೆ ಕನ್ನಡ ರಾಜ್ಯೋತ್ಸವ ದಿನದಂದು ಎಂಇಎಸ್ನಿಂದ ಕರಾಳ ದಿನಾಚರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೂವರು ಡಿಸಿಪಿಗಳ ನೇತೃತ್ವದಲ್ಲಿ 3,000ಕ್ಕೂ ಅಧಿಕ ಪೊಲೀಸರು 300ಅಧಿಕ ಸಿಸಿ ಕ್ಯಾಮೆರಾ ಬಳಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
Rain In karnataka : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
ಬೆಳಗಾವಿಯಲ್ಲಿ ನಡೆಯುವ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಾಗೂ ಎಂಇಎಸ್ ಪುಂಡರ್ ಕರಾಳ ದಿನಾಚರಣೆ ಹಿನ್ನೆಲೆ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಗಾವಿ ನಗರ ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸ್ ವಾಹನಗಳ ರೂಟ್ ಮಾರ್ಚ್ ನಡೆಸಲಾಯಿತು.