ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಶ್ರೀಗಳ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಶ್ರೀಗಳ ವಿಚಾರಣೆಗಾಗಿ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ಕೇಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಇಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಕ್ಕೆ ಮನವಿ ಮಾಡಲಿದ್ದಾರೆ.ಸದ್ಯ ಮುರುಘಾ ಶ್ರೀಗಳ ೧ನೇ ಪೋಕ್ಸೋ ಕೇಸಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ಟೋಬರ್ 13 ರಂದು 2ನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕೋರ್ಟ್ ಅನುಮತಿ ಪಡೆದು ಮುರುಘಾ ಶ್ರೀಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಬೇಕಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಂದ ತನಿಖಾಧಿಕಾರಿ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ . ಇನ್ನು ಸ್ಥಳದಲ್ಲಿ ಮಹಜರು ಮಾಡಲಾಗಿದೆ. ಜೊತೆಗೆ ಮೆಡಿಕಲ್ ಟೆಸ್ಟ್ ಕೂಡ ನಡೆಯಬೇಕಿದೆ.