ಧಾರವಾಡ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಿಂದ 18 ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ಶಶಿ ಪಾಟೀಲ ಅವರು, ಗುತ್ತಿಗೆ ಆಧರದ ಹುದ್ದೆಗಳಿಗೆ ಬಿ.ಎಸ್.ಸಿ ನರ್ಸಿಂಗ್ ಮತ್ತು ಪೋಸ್ಟ್ ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಇಚ್ಚೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ ರೂ. 22 ಸಾವಿರ ನೀಡಲಾಗುವುದು. ಮತ್ತು ಇದರೊಂದಿಗೆ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನ ರೂ. 8 ಸಾವಿರ ವರೆಗೆ ನೀಡಲಾಗುವುದು.
ಅರ್ಜಿಯನ್ನು ಕೇವಲ ಆನ್ಲೈನ್ ಮುಖಾಂತರ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಲ್ಲಿಸಬೇಕು ಹಾಗೂ ಪರೀಕ್ಷೆಯನ್ನು ಆನ್ಲೈನ್ ಮುಖಾಂತರ ನೆಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://karunadu.karnataka.gov.in/hfw ಸಂಪರ್ಕಿಸಬಹುದು.
ಆಸಕ್ತರು ನವೆಂಬರ್ 8, 2022ರ ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದು. ನಿಯಮಾನುಸಾರ, ನಿಗದಿಯಂತೆ ಆನ್ಲೈನ್ ಪರೀಕ್ಷೆಯನ್ನು ನವೆಂಬರ್ 19, 2022 ರಂದು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.