ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಕರೆದರೆ ಹೋಗಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಒಬ್ಬ ಜೋಕರ್ ಎಂದು ವಾಗ್ದಾಳಿ ನಡೆಸಿದ್ದಾರೆ.
BIGG NEWS: ಮನೆ ತೆರವುಗೊಳಿಸಲು ಮುಂದಾದ ಅಧಿಕಾರಿಗೆ ಕಲ್ಲೇಟು; ಮನೆ ಮಾಲೀಕ ಅವಾಜ್
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಹೇ ಕೇಳಯ್ಯ ಇಲ್ಲಿ, ಬಿಜೆಪಿಯವರು ಕರೆದರೆ ಹೋಗಬೇಡಿ ಎಂದು ಎರಡೆರಡು ಬಾರಿ ಎಚ್ಚರಿಕೆ ಕೊಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾರ್ಯಕರ್ತರು, ಇಲ್ಲ ನಾವು ಪಕ್ಷಬಿಟ್ಟು ಹೋಗುವುದಿಲ್ಲ. ಬಿಜೆಪಿ ಕರೆದರೂ ಹೋಗಲಾರೆವು. ಈ ಬಗ್ಗೆ ಭಾನುವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.