ರಾಮನಗರ: ಜಿಲ್ಲೆಯ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಎ 1 ಆರೋಪಿ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ಎ 2 ಆರೋಪಿ ನೀಲಾಂಬಿಕೆ, ಎ3 ಆರೋಪಿ ಮಹಾದೇವಯ್ಯ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಮಾಗಡಿ 1 ನೇ ಜೆಎಂಸಿ ಕೋರ್ಟ್ ನ್ಯಾಯಮೂರ್ತಿ ಧನಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಸಂಬಂಧ ಇತ್ತೀಚೆಗೆ ನ್ಯಾಯಾಲಯ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, . ಸಹೋದರ ಸಂಬಂಧಿಯಾಗಿದ್ದಂತ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿಯೇ ಹನಿಟ್ರ್ಯಾಫ್ ಮಾಡಿಸಿರೋದಾಗಿ ತಿಳಿದು ಬಂದಿತ್ತು. ಈ ಸಂಬಂಧ ಪೊಲೀಸರು ಮೃತ್ಯುಂಜಯ ಶ್ರೀಗ ಹಾಗೂ ಅವರ ಜೊತೆಗೆ ಹನಿಟ್ರ್ಯಾಪ್ ಮಾಡಿದ್ದಂತ ಯುವತಿಯನ್ನು ಬಂಧಿಸಿದ್ದರು.
ಅಂದಹಾಗೇ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ವಾಮೀಜಿ ವಿರುದ್ಧ ಹನಿಟ್ರ್ಯಾಪ್ ನಡೆದಿದ್ದು, ಡೆತ್ನೋಟ್ನಲ್ಲಿ ಸಂಚಿನ ಬಗ್ಗೆ ಕುಂಚಗಲ್ ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿ ಬರೆದಿದ್ದಾರೆ. ಕುಂಚಗಲ್ ಸ್ವಾಮೀಜಿ ಕೆಳಗಿಳಿಸಲು ನಡೆದಿತ್ತು ಮಾಸ್ಟರ್ ಪ್ಲಾನ್, ಮಾಸ್ಟರ್ ಪ್ಲಾನ್ ಹಿಂದೆ ಇರೋ ವ್ಯಕ್ತಿ ಮತ್ತೋರ್ವ ಸ್ವಾಮೀಜಿ ಎನ್ನಲಾಗಿತ್ತು.