ಕುಪ್ವಾರಾ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಸೆಕ್ಟರ್ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ಪ್ರಮುಖ ಒಳನುಸುಳುವಿಕೆಯ ಸಂಚನ್ನ ಸೇನೆ ವಿಫಲಗೊಳಿಸಿದೆ. ಈ ಕಾರ್ಯಾಚರಣೆಯಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನ ಹತ್ಯೆ ಮಾಡಲಾಗಿದೆ. ಇನ್ನು ಸೇನೆಯಿಂದ ಕಾರ್ಯಾಚರಣೆ ನಡೆಯುತ್ತಿದೆ.
ಇದಕ್ಕೂ ಮೊದಲು, ಭದ್ರತಾ ಪಡೆಗಳು ಸೋಮವಾರ ಬೆಳಿಗ್ಗೆ ಶೋಪಿಯಾನ್ ಜಿಲ್ಲೆಯ ಬಾಲಪೋರಾದಿಂದ ಇಬ್ಬರು ಭಯೋತ್ಪಾದಕರನ್ನ ಬಂಧಿಸಿವೆ. ಇವರಿಬ್ಬರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ಯುರೋಪ್ನಿಂದ ಕಾರ್ಯನಿರ್ವಹಿಸುತ್ತಿದ್ದ ಭಯೋತ್ಪಾದಕ ಮಾಡ್ಯೂಲ್ ಭೇದಿಸಿದ್ದಾರೆ ಎಂದು ಹೇಳಿದ್ದಾರೆ. ಜಮ್ಮುವಿನಲ್ಲಿ ಡ್ರೋನ್ಗಳ ಸಹಾಯದಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸರಕನ್ನು ಬೀಳಿಸುವಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ಇಬ್ಬರು ಸದಸ್ಯರನ್ನ ಪೊಲೀಸರು ಬಂಧಿಸಿದ್ದಾರೆ.
ಕಾರ್ತಿಕ ಮಾಸದಲ್ಲಿ ದೀಪವನ್ನು ಏಕೆ ಹಚ್ಚಬೇಕು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ