ಚಿತ್ರದುರ್ಗ : ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸರು ಮೈಸೂರು ಒಡನಾಡಿ ಸಂಸ್ಥೆಯ ನಾಲ್ವರನ್ನು ವಿಚಾರಣೆಗೊಳಪಡಿಸಿದ್ದಾರೆ.
ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಮೈಸೂರು ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ , ಸಿಬ್ಬಂದಿ ಪರಶುರಾಮ್ ಸೇರಿ ನಾಲ್ವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಡಿವೈಎಸ್ ಪಿ ಅನಿಲ್ ನೇತೃತ್ವದ ತಂಡ ಮೈಸೂರು ಒಡನಾಡಿ ಸಂಸ್ಥೆಯ ನಾಲ್ವರನ್ನು ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.
ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕೇಸ್ ( POSCO Case ) ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ 4ನೇ ಆರೋಪಿಯಾಗಿದ್ದಂತ ಮುರುಘಾ ಮಠದ ( Murugha Matt ) ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ( Karnataka Police ) ಇತ್ತೀಚೆಗೆ ಬಂಧಿಸಿದ್ದಾರೆ.
ಮುರುಘಾ ಶ್ರೀಗಳ ( Murugha Sri ) ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈಗಾಗಲೇ ಪ್ರಕರಣದಲ್ಲಿ ಮುರುಘಾ ಶ್ರೀ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೇ ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಕೇಸ್ ದಾಖಲಾಗಿದೆ. ಮೊದಲನೇ ಪ್ರಕರಣದಲ್ಲಿ ಶ್ರೀಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಈ ಬಳಿಕ ಎರಡನೇ ಪ್ರಕರಣ ಕೂಡ ದಾಖಲಾಗಿದ್ದು, ಆ ಸಂಬಂಧದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ‘ಎಂಇಎಸ್’ ಸಿದ್ದತೆ : ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
Vastu Tips: ವಾಸ್ತುಪ್ರಕಾರ ಮನೆಯಲ್ಲಿ ಆಮೆಯನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಶುಭ..?