ನವದೆಹಲಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ವಿರುದ್ಧ ಅವ್ಯವಹಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ( Supreme Court ) ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ಇಂದು ಮತ್ತೆ ಈ ತಡೆಯಾಜ್ಞೆಯನ್ನು ಮುಂದುವರಿಸಿ ಆದೇಶಿಸಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ 2 ಕೋಟಿ ಲಂಚ ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದಂತ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ತಡೆ ನೀಡಿದ್ದಂತ ಸುಪ್ರೀಂ ಕೋರ್ಟ್, ತಾತ್ಕಾಲಿಕವಾಗಿ ತಡೆಯಾಜ್ಞೆಯನ್ನು ಪ್ರಕರಣಕ್ಕೆ ನೀಡಿತ್ತು.
ಇಂದು ಸುಪ್ರೀಂ ಕೋರ್ಟ್ ನೀಡಿದ್ದಂತ ತಾತ್ಕಾಲಿಕ ತಡೆಯಾಜ್ಞೆ ಕೊನೆಗೊಂಡಿತ್ತು. ಹೀಗಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆ ಮುಂದುವರೆಸುವಂತೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ದ್ವಿಸದಸ್ಯ ನ್ಯಾಯಪೀಠವು, ಹೈಕೋರ್ಟ್ ತೀರ್ಪಿಗೆ ನೀಡಿದ್ದಂತ ತಡೆಯನ್ನು ವಿಸ್ತರಿಸಿ ಆದೇಶಿಸಿದ್ದಾರೆ. ಈ ಮೂಲಕ ಮತ್ತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದಾರೆ.