ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಕೆ ಎಂ ಎಫ್ ನಿಂದ ( KMF ) ನಂದಿನಿ ಹಾಲಿನ ದರ ( Nandini Milk Price ) ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಮೂಲಕ ಮತ್ತೊಂದು ಶಾಕ್ ನೀಡೋದಕ್ಕೆ ಮುಂದಾಗಿದೆ.
ಈ ಕುರಿತಂತೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹೊಲಿಕಟ್ಟೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ( KMF President Balachandra Jarkiholi ) ಅವರು, ನಂದಿನ ಹಾಲಿನ ದರವನ್ನು ಹೆಚ್ಚಳ ಮಾಡುವ ಸಂಬಂಧ 16 ಹಾಲು ಒಕ್ಕೂಟಗಳಿಂದ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಅಲ್ಲದೇ ದರ ಏರಿಕೆ ಬಗ್ಗೆ ಕೆಎಂಎಫ್ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೂಡ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ನಂದಿನ ಹಾಲಿನ ದರವನ್ನು ( Nandini Milk Price Hike ) ಶೀಘ್ರವೇ ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡಲಾಗುತ್ತದೆ. ದರ ಪರಿಷ್ಕರಣೆಯಿಂದ ಬಂದ ಹಣ ಸಂಪೂರ್ಣವಾಗಿ ರೈತರಿಗೆ ಸಿಗಲಿದೆ ಎಂಬುದಾಗಿ ತಿಳಿಸಿದರು.