ಚಿತ್ರದುರ್ಗ : ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ವಿಚಾರಣೆಯನ್ನು ನವೆಂಬರ್ 2 ಕ್ಕೆ ಮುಂದೂಡಲಾಗಿದೆ.
ಪ್ರಕರಣದ ಎ 6 ಆರೋಪಿ ಮುರುಘಾಶ್ರೀ ಸಹಾಯಕ ಮಹಾಲಿಂಗ ಹಾಗೂ ಎ 7 ಆರೋಪಿ ಅಡುಗೆ ಭಟ್ಟ ಕರಿಬಸಪ್ಪ ಸಲ್ಲಿಸಿದ್ದ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ನವೆಂಬರ್ 2 ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಇನ್ನೂ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕೇಸ್ ( POSCO Case ) ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ 4ನೇ ಆರೋಪಿಯಾಗಿದ್ದಂತ ಮುರುಘಾ ಮಠದ ( Murugha Matt ) ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ( Karnataka Police ) ಬಂಧಿಸಿದ್ದಾರೆ.
ಮುರುಘಾ ಶ್ರೀಗಳ ( Murugha Sri ) ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈಗಾಗಲೇ ಪ್ರಕರಣದಲ್ಲಿ ಮುರುಘಾ ಶ್ರೀ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿದ್ದಾರೆ.
BIGG NEWS : ಕೊಮ್ಮೆನಹಳ್ಳಿ ಕ್ವಾರಿ ಬ್ಲಾಸ್ಟ್ ಕೇಸ್ : ಮಾಲೂರು ಶಾಸಕ ನಂಜೇಗೌಡರಿಗೆ ಎದುರಾಗಲಿದ್ಯಾ ಸಂಕಷ್ಟ..?