ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಮತ್ತು ಅಧಿಸೂಚಿತ ಪ್ರದೇಶ ಸಮಿತಿಗಳ ವ್ಯಾಪ್ತಿಯಲ್ಲಿ ಉದ್ದಿಮೆದಾರರು ( Entrepreneur ) ಸರಳವಾಗಿ ಹಾಗೂ ಪಾರದರ್ಶಕವಾಗಿ ಉದ್ದಿಮೆ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ ಉದ್ದಿಮೆಗಳ ಪರವಾನಿಗೆ ಅವಧಿಯನ್ನು 5 ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ( Karnataka Government ) ಗೆಜೆಟ್ ಅಧಿಸೂಚನೆ ( Gazette Notification ) ಹೊರಡಿಸಿದೆ. ಈ ಮೂಲಕ ಉದ್ದಿಮೆದಾರರಿಗೆ ಭರ್ಜರಿ ಗಿಫ್ಟ್ ನೀಡಿದೆ.
ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಯಲ್ಲಿನ ಉದ್ದಿಮೆದಾರರು ಸರಳವಾಗಿ ಹಾಗೂ ಪಾರದರ್ಶಕವಾಗಿ ಉದ್ದಿಮೆ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ ಪ್ರಸ್ತುತ 1 ವರ್ಷಕ್ಕೆ ಮಾತ್ರ ಉದ್ದಿಮೆ, ವಾಣಿಜ್ಯ ಪರವಾನಗಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಈ ಪರವಾನಗಿ ನವೀಕರಣ ಸಂದರ್ಭದಲ್ಲಿ ಆಗುತ್ತಿರುವ ಅನಾನುಕೂಲಗಳನ್ನು ತಪ್ಪಿಸಲು ಹಾಗೂ ಉದ್ದಿಮೆದಾರರು ಸರಳವಾಗಿ ಹಾಗೂ ಪಾರದರ್ಶಕವಾಗಿ ಉದ್ದಿಮೆ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ ಆಡಳಿತಾಂತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ಅವಕಾಶ ಮಾಡಲಾಗಿದೆ. ಇನ್ಮುಂದೆ ಕಡ್ಡಾಯವಾಗಿ ಉದ್ದಿಮೆದಾರರ ಹಿತದೃಷ್ಠಿಯಿಂದ ನಿಗದಿತ ಕಾಲಮಿತಿಯೊಳಗೆ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಕೆಲ ಷರತ್ತು ವಿಧಿಸಿ ಆದೇಶಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ