ಧಾರವಾಡ: ಚಳ್ಳಕೆರೆಯ ಸಿಪಿಐ ಉಮೇಶ್ ( CPI Umesh ) ಎಂಬುವರನ್ನು ಯುವತಿಗೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅಮಾನತುಗೊಳಿಸಿದ ಪ್ರಕರಣ ಹಸಿಯಾಗಿರೋ ಮುನ್ನವೇ, ಧಾರವಾಡದಲ್ಲಿ ಸಿಪಿಐ ಒಬ್ಬರು ವಕೀಲೆ ಜೊತೆಗೆ ಅನುಚಿತವಾಗಿ ವರ್ತಿಸಿರೋ ಘಟನೆ ನಡೆಸಿದೆ. ಅಲ್ಲದೇ ಈ ಘಟನೆ ಸಂಬಂಧ ಸಿಪಿಐ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ( Dharwada Rural Police Station ) ಇನ್ಸ್ ಪೆಕ್ಟರ್ ಮಂಜುನಾಥ್ ಕುಸುಗಲ್ ( Inspector Manjunath Kusugal ) ಎಂಬುವರೇ ವಕೀಲೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವಂತವರಾಗಿದ್ದಾರೆ. ಈ ಸಂಬಂಧ ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಂದಹಾಗೇ ಇನ್ಸ್ ಪೆಕ್ಟರ್ ಮಂಜುನಾಥ್ ಕುಸುಗಲ್ ಅವರು ವಕೀಲೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎನ್ನಲಾಗಿದೆ. ಈ ಸಂಬಂಧ ವಕೀಲೆ ( Laywer ) ಧಾರವಾಡ ಉಪ ನಗರ ಪೊಲೀಸ್ ಠಾಣೆಗೆ ಸಿಪಿಐ ಮಂಜುನಾಥ್ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಸಿಪಿಐ ಮಂಜುನಾಥ್ ಕುಸುಗಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
BREAKING : 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: CIDಯಿಂದ ಮತ್ತೆ 6 ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಕೆ