ಬೆಂಗಳೂರು: ನ.1 ರಂದು ಅಂದ್ರೆ, ಇಂದು ಸಂಜೆ 4.00 ಗಂಟೆಗೆ ಪುನೀತ್ ರಾಜ್ ಕುಮಾರ್(Puneeth Raj kumar) ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.
ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ 20 ಸಾವಿರ ಜನ ಸೇರುವ ಸಾಧ್ಯತೆ ಇದ್ದು, ಸೂಪರ್ ಸ್ಟಾರ್ ರಜಿನಿಕಾಂತ್ ಜ್ಯೂ.ಎನ್ಟಿಆರ್ ಆಗಮಿಸುತ್ತಿದ್ದಾರೆ. ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಇಂದು ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ.
ವಿಧಾನಸೌಧದ ಎದುರು ಇಂದು ಸಂಜೆ 4 ಗಂಟೆಗೆ ಈ ಸಮಾರಂಭ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ವಿಧಾನಸೌಧದ ಮುಂಭಾಗದ ರಸ್ತೆಯನ್ನು ಬ್ಲಾಕ್ ಮಾಡಲಾಗುತ್ತಿದೆ.ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿಧಾನಸೌಧದ ಎದುರು ನಾಳೆ ಸಂಜೆ 4 ಗಂಟೆಗೆ ಈ ಸಮಾರಂಭ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ವಿಧಾನಸೌಧದ ಮುಂಭಾಗದ ರಸ್ತೆಯನ್ನು ಬ್ಲಾಕ್ ಮಾಡಲಾಗುತ್ತಿದೆ.
ದಿವಂಗತ ಡಾ: ಪುನೀತ್ ರಾಜ್ ಕುಮಾರ್ ( Actor Dr Puneeth Rajkumar ) ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಯ ಪ್ರತಿಮೆ ಉದ್ಘಾಟನೆಯಾಗುತ್ತಿದೆ. ಕೆಂಪೇಗೌಡರು ಪ್ರಗತಿಯ ಸಂಕೇತವಾಗಿದ್ದು, ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ.
ಕರುನಾಡಿನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಸರ್ಕಾರಿ ಸೇರಿದಂತೆ ಇತರೆ ಸಂಘ-ಸಂಸ್ಥೆಗಳಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಎಲ್ಲೆಲ್ಲಿಯೂ ಕನ್ನಡದ ಧ್ವಜ ಹಾರಾಡಬೇಕು. ಈ ಮೂಲಕ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
BIG NEWS: ನೆರೆಯ ರಾಷ್ಟ್ರ ಪಾಕ್ನಲ್ಲಿ ಭೂಕಂಪ: 4.8 ತೀವ್ರತೆ ದಾಖಲು | Earthquake in Pakistan