ಬೆಂಗಳೂರು : ವಿಜಯಪುರ ಮಹಾನಗರ ಪಾಲಿಕೆ ಸೇರಿ ರಾಜ್ಯದ 51 ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
BIG NEWS: ಇಂದು ‘SCO ಕೌನ್ಸಿಲ್ ಆಫ್ ಗವರ್ನಮೆಂಟ್’ನ 21ನೇ ಸಭೆ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗಿ
ಒಟ್ಟು 51 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 15, ಜೆಡಿಎಸ್ 2 ಇತರೆ ಪಕ್ಷಗಳು 2 ಹಾಗೂ ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.ಒಟ್ಟು 35 ಸ್ಥಾನಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 10 ಹಾಗೂ ಜೆಡಿಎಸ್ 1 ಸ್ಥಾನ ಗೆಲುವು ಸಾಧಿಸಿದೆ. ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಪುರಸಭೆಯ ಏಳು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಆರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ 31 ಸದಸ್ಯ ಬಲದ ನಗರಸಭೆಯಲ್ಲಿ ಅಧಿಕಾರರೂಡ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.