ಕಲಬುರಗಿ: ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಬೇಕೆಂದು ಕಲ್ಯಾಣ ಕ ರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದೆ. ಈ ವೇಳೆ ಪೊಲೀಸರು ನೂರಾರು ಜನರನ್ನು ವಶಕ್ಕೆ ಪಡೆದಿದ್ದಾರೆ.
BIGG NEWS: ಅಪ್ಪು ನೋಡಲು ಸಮಾಧಿಗೆ ಬಂದ ಅಭಿಮಾನಿಗಳಿಗೆ ಉಚಿತ ಐಸ್ ಕ್ರೀಂ; ಮಕ್ಕಳು ಫುಲ್ ಖುಷ್
ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾದಾಗಿದ್ದು, ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಚಿವ ದಿ. ಉಮೇಶ ಕತ್ತಿ ಹಾಗೂ ವೈಜನಾಥ ಪಾಟೀಲ್ರ ಭಾವಚಿತ್ರ ಮತ್ತು ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ನೂರಾರು ಜನ ಸೇರಿ ಹೋರಾಟ ನಡೆಸಿದ್ದರು. ಕೋರ್ಟ್ ಮಾರ್ಗವಾಗಿ ಪಟೇಲ್ ವೃತ್ತಕ್ಕೆ ಧ್ವಜಾರೋಹಣ ಮಾಡಲು ಬರುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದರು.