ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ ಇಂದು ರಾಜ್ಯ ಸಾರಿಗೆ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
EPF ಸಿಹಿ ಚಂದದಾರರಿಗೆ ಸಿಹಿ ಸುದ್ದಿ: ಪಿಎಫ್ ಹಿಂಪಡೆಯುವ ನಿಯಮಗಳಲ್ಲಿ ಬದಲಾವಣೆ, ಇಲ್ಲಿದೆ ಮಾಹಿತಿ
ಬಸ್ ಯವತ್ಮಾಲ್ನಿಂದ ಪುಣೆಗೆ ತೆರಳುತ್ತಿದ್ದಾಗ ಯರವಾಡ ಪ್ರದೇಶದ ಶಾಸ್ತ್ರಿ ಚೌಕ್ನಲ್ಲಿ ಬೆಳಿಗ್ಗೆ 11.30 ರ ಸುಮಾರಿಗೆ ಘಟನೆ ನಡೆದಿದೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.
ಬಸ್ ಚಾಲಕ ಮತ್ತು ಕಂಡಕ್ಟರ್ ವಾಹನದಿಂದ ಹೊಗೆ ಬರುವುದನ್ನು ಕಂಡ ಕೂಡಲೇ ಎಲ್ಲಾ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪ್ರಯಾಣಿಕರು ಕೆಳಗಿಳಿದ ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ ಆದರೆ ಬಸ್ಸಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ.
BIGG NEWS: ಕಾರವಾರದಲ್ಲಿ ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಪ್ರವಾಸಿಗರು