ಜಮ್ಮು ಮತ್ತು ಕಾಶ್ಮೀರ : ದಕ್ಷಿಣ ಕಾಶ್ಮೀರದ ಅನಂತನಾಗ್ನ ಸಮತಾನ್ ಬಿಜ್ಬೆಹರಾ ಪ್ರದೇಶದಲ್ಲಿ ಇಂದು ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಂತನಾಗ್ನ ಸೆಮ್ಥಾನ್, ಬಿಜ್ಬೆಹರಾ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳದಲ್ಲಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
J&K | An encounter has started at Semthan, Bijbehara area in Anantnag. Police and security forces are on the spot. Further details shall follow: J&K police
(Visuals deferred by unspecified time) pic.twitter.com/hI4AxoTJud
— ANI (@ANI) November 1, 2022
ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸೇನೆಯ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿದ್ದು,ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಅಕ್ಟೋಬರ್ 10 ರಂದು ಅನಂತನಾಗ್ ಜಿಲ್ಲೆಯ ಕೋಕರ್ನಾಗ್ನ ತಂಗ್ಪಾವಾ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು.