ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿಧಾನಸೌಧದ ಕಡೆಗೆ ಡಾ. ರಾಜ್ ಕುಮಾರ್ ಕುಟುಂಬ ಹೊರಟಿದ್ದಾರೆ.
ಎರಡು ಬಸ್ ಗಳಲ್ಲಿ ಡಾ. ರಾಜ್ ಕುಟುಂಬ ಹೊರಟಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಜ್ಯೂ. ಎನ್ ಟಿಆರ್ ಆಗಮಿಸಲಿದ್ದಾರೆ.
ಇತ್ತ, ಸಮಾರಂಭಕ್ಕೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ವಿಧಾನಸೌಧದ ಮುಂದೆ ಜನ ಸಾಗರವೇ ಹರಿದು ಬಂದಿದೆ. ಬೆಳಗ್ಗೆಯಿಂದಲೇ ವಿಧಾನಸೌಧದ ಮುಂದೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಈಗಾಗಲೇ ಜ್ಯೂನಿಯರ್ ಎನ್ ಟಿಆರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸಚಿವರಾದ ಮುನಿರತ್ನ ಮತ್ತು ಡಾ. ಸುಧಾಕರ್ ಸ್ವಾಗತ ಕೋರಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಆಗಮಿಸಿದ್ದಾರೆ. ಅವರು ಸದ್ಯ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆದು ಕೆಲವೇ ಕ್ಷಣಗಳಲ್ಲಿ ವಿಧಾನಸೌಧಕ್ಕೆ ಬರಲಿದ್ದಾರೆ.
ಇನ್ನು ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇನ್ನು ಸೂಪರ್ ಸ್ಟಾರ್ ತಮಿಳು ನಟ ರಜನಿಕಾಂತ್, ತೆಲಗು ನಟ ಜೂ.ಎನ್ ಟಿ ಆರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು 7 ಜನ ಎಸಿಪಿ, 16 ಜನ ಇನ್ಸ್ಪೆಕ್ಟರ್, 25 ಪಿಎಸ್ಐ 300 ಕಾನ್ಸ್ಟೇಬಲ್ಗಳು ಹಾಗೂ 6 ಕೆಎಸ್ಆರ್ಪಿ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.