ಗುಜರಾತ್ : ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರೊಂದಿಗೆ ಮೊರ್ಬಿಯಲ್ಲಿ ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಿದರು. ಮಚ್ಚು ನದಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.
ಭಾನುವಾರ ತೂಗು ಸೇತುವೆ ಕುಸಿದುಬಿದ್ದು, ಮಕ್ಕಳು ಸೇರಿದಂತೆ ಕನಿಷ್ಠ 135 ಜನರು ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೋರ್ಬಿ ಪಟ್ಟಣದ ಕೇಬಲ್ ತೂಗು ಸೇತುವೆ ದುರಂತದಲ್ಲಿ ಗಾಯಗೊಂಡವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
#WATCH | PM Modi along with Gujarat CM Bhupendra Patel visits the cable bridge collapse site in Morbi, Gujarat
135 people lost their lives in the tragic incident pic.twitter.com/pXJhV7aqyi
— ANI (@ANI) November 1, 2022
ಮೊರ್ಬಿಯಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಸೋಮವಾರ ಗಾಂಧಿನಗರದ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೋರ್ಬಿಯಲ್ಲಿ ದುರದೃಷ್ಟಕರ ದುರ್ಘಟನೆ ನಡೆದಾಗಿನಿಂದ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತು ಮಾಹಿತ ಪಡೆದಿದ್ದರು.
ಸಭೆಯಲ್ಲಿ ದುರಂತಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಚರ್ಚೆ ನಡೆಸಲಾಇದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ಸಿಗುವಂತೆ ನೋಡಿಕೊಳ್ಳಲು ಪ್ರಧಾನಿ ಒತ್ತು ನೀಡಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.