ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕಳೆದ ವಾರದಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಶುರುವಾಗಿದೆ.
BIG NEWS: ರಾಜ್ಯದ SC, ST ಸಮುದಾಯದವರಿಗೆ ಗುಡ್ ನ್ಯೂಸ್: ಮೀಸಲಾತಿ ಆದೇಶ ಪಾಲಿಸುವಂತೆ ಸರ್ಕಾರ ಖಡಕ್ ಆದೇಶ
ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತವರಣವಿತ್ತು. ಇದೀಗ ನಗರದಲ್ಲಿ ಮಳೆಯ ಅಬ್ಬರ ಶುರುವಾಗಿದೆ. ನಗರದ ಮೆಜೆಸ್ಟಿಕ್ , ಯಶವಂತಪುರ ಸೇರಿದಂತೆ ಹಲವು ಕಡೆ ಮಳೆ ಸುರಿಯುತ್ತಿದೆ.ಇನ್ನು ಭಾರೀ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿರುವ ಮಳೆ ನವೆಂಬರ್ ನಲ್ಲಿ ಮತ್ತೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮುಂಗಾರು ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದೆ. ನಾಳೆಯಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.