ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ವಿಧಾನಸೌಧದ ಮುಂಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ಸೂಪರ್ ಸ್ಟಾರ್ ರಜನಿಕಾಂತ್ ( Super Star Rajanikanth ), ಜೂನಿಯರ್ ಎನ್ ಟಿ ಆರ್ ( Junior NTR ) ಅವರು ಕನ್ನಡದಲ್ಲಿಯೇ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಅಪ್ಪುಗೆ ರಾಜ್ಯ ಸರ್ಕಾರದಿಂದ ಇಂದು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರನ್ನಾಗಿ ಸೂಪರ್ ಸ್ಟಾರ್ ರಜನಿಕಾಂತ್, ಟಾಲಿವುಟ್ ನಟ ಜೂನಿಯರ್ ಎನ್ ಟಿ ಆರ್ ಅವರನ್ನು ಸರ್ಕಾರ ಆಹ್ವಾನಿಸಲಾಗಿತ್ತು. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದು, ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ವಿಶ್ರಾಂತಿ ತೆಗೆದುಕೊಂಡು ಬಳಿಕ, ಇದೀಗ ವಿಧಾನಸೌಧಕ್ಕೆ ಕಾರ್ಯಕ್ರಮ ವೇದಿಕೆಗೆ ಆಗಮಿಸಿದರು.
ವಿಧಾನಸೌಧದಲ್ಲಿನ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದಂತ ಸೂಪರ್ ಸ್ಟಾರ್ ರಜನಿಕಾಂತ್ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದರೇ, ಜೂನಿಯರ್ ಎನ್ ಟಿ ಆರ್ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕನ್ನಡದಲ್ಲಿಯೇ ಕೋರಿದರು.