ಕೆಎನ್ಎನ್ ಡಿಜಿಟಲ್ ಡೆಸ್ಕ್ : ನಟಿ ರಂಭಾ ಕನ್ನಡ, ತೆಲುಗು, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿದ್ದು, ಈ ಮೂಲಕ ದಕ್ಷಿಣ ಭಾರತದ ಖ್ಯಾತಿ ಪಡೆದಿದ್ದಾರೆ. ಸದ್ಯ ವಿದೇಶದಲ್ಲಿ ನೆಲೆಸಿದ್ದಾರೆ.
ಕೆನಡಾದಲ್ಲಿ ರಂಭಾ ನೆಲೆಸಿದ್ದು, ಮಗಳನ್ನು ಮನೆಗೆ ಕರೆದುಕೊಂಡು ಬರುವಾಗ ಅವರ ಕಾರು ಅಪಘಾತಗೊಂಡಿತ್ತು. ಈ ವೇಳೆ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅವರ ಮಗಳು ಸಶಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅವಳಿಗೆ ಚಿಕಿತ್ಸೆ ಮುಂದುವರಿದಿದೆ.
ಅಪಘಾತದ ಬಗ್ಗೆ ರಂಭಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಕಾರಿನ ಏರ್ಬ್ಯಾಗ್ ತೆಗೆದುಕೊಂಡಿದ್ದರಿಂದ ದೊಡ್ಡ ಮಟ್ಟದ ತೊಂದರೆ ಉಂಟಾಗಿಲ್ಲ. ಕಾರು ಜಖಂಗೊಂಡಿದ್ದು, ಸಶಾಗೆ ಗಾಯಗಳಾಗಿವೆ.
ರಂಭಾ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಕಾರಿಗೆ ಮತ್ತೊಂದು ಕಾರು ಬಂದು ಗುದ್ದಿದೆ. ಎಲ್ಲರೂ ಸೇಫ್ ಆಗಿದ್ದೇವೆ. ಸಶಾ ಆಸ್ಪತ್ರೆಯಲ್ಲೇ ಇದ್ದಾರೆ. ಬ್ಯಾಡ್ ಟೈಮ್. ದಯವಿಟ್ಟು ಪ್ರಾರ್ಥಿಸಿ ಎಂದು ಅವರು ಕೋರಿದ್ದಾರೆ.
ರಂಭಾ ಅವರು ದಕ್ಷಿಣ ಭಾರತದಲ್ಲಿ ಸಖತ್ ಫೇಮಸ್. ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮ್ಮ ಗ್ಲಾಮರ್ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಕನ್ನಡದಲ್ಲಿ ರವಿಚಂದ್ರನ್ ಸೇರಿ ಕೆಲ ಹೀರೋಗಳ ಜತೆ ತೆರೆ ಹಂಚಿಕೊಂಡಿದ್ದಾರೆ. ರಜನಿಕಾಂತ್, ಕಮಲ್ ಹಾಸನ್ ಮೊದಲಾದ ಸ್ಟಾರ್ಗಳ ಜತೆ ರಂಭಾ ತೆರೆ ಹಂಚಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ, ಬೆಂಗಾಲಿ ಮೊದಲಾದ ಭಾಷೆಗಳಲ್ಲೂ ಬಣ್ಣ ಹಚ್ಚಿದ್ದಾರೆ.
2010ರಲ್ಲಿ ಅವರು ಕೆನಡಾ ಮೂಲದ ಉದ್ಯಮಿ ಇಂದ್ರಕುಮಾರ್ ಅವರನ್ನು ಮದುವೆ ಆದರು. ನಟಿಗೆ ಮೂವರು ಮಕ್ಕಳು. ಸದ್ಯ ಅವರು ವಿದೇಶದಲ್ಲಿ ಸೆಟಲ್ ಆಗಿದ್ದಾರೆ. ಅಲ್ಲಿಯೇ ಅವರಿಗೆ ಅಪಘಾತ ಉಂಟಾಗಿದೆ.
BIGG NEWS : ‘ಸಾಮೂಹಿಕ ವಜಾ’ ನಂತ್ರ ಉದ್ಯೋಗಿಗಳ ಕ್ಷಮೆಯಾಚಿಸಿದ ಬೈಜು ‘CEO’