ತುಮಕೂರು : ತುಮಕೂರಿನಲ್ಲಿ ಪೊಲೀಸ್ ಆಕಾಂಕ್ಷಿ ಮೇಲೆ ಡಿವೈಎಸ್ಪಿ ಹಲ್ಲೆ ನಡೆಸಿದ ಘಟನೆ ಕುರಿತು ಕಠಿಣ ಕ್ರಮಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.
ಆರಗ ಜ್ಞಾನೇಂದ್ರ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ ಎಂದು ಕಿಡಿಕಾರಿದೆ.
ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಗೃಹ ಸಚಿವರೇ , ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳ ಅಷ್ಟೇ, ನೆನಪಿರಲಿ.
PSI ಹಗರಣದಿಂದ ಸಂತ್ರಸ್ತರಾಗಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಆತಗ ಜ್ಞಾನೇಂದ್ರ ಅವರೇ? ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ತುಮಕೂರಿನಲ್ಲಿ ಡಿವೈಎಸ್ಪಿ ಶ್ರೀನಿವಾಸ್ ದರ್ಪ ಮೆರೆದಿದ್ದು, ಗೃಹ ಸಚಿವರ ಭೇಟಿಗೆ ಬಂದಿದ್ದ ಪೊಲೀಸ್ ಹುದ್ದೆ ಆಕಾಂಕ್ಷಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಹುದ್ದೆ ವಯೋಮಿತಿ ಹೆಚ್ಚಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಬಂದಿದ್ದ ಉತ್ತರ ಕರ್ನಾಟಕ ಭಾಗದ ಪೊಲೀಸ್ ಹುದ್ದೆ ಆಕಾಂಕ್ಷಿಗಳ ಮೇಲೆ ಸಾರ್ವಜನಿಕರ ಎದುರೇ ತುಮಕೂರು ಡಿವೈಎಸ್ಪಿ ಶ್ರೀನಿವಾಸ್ ಕಪಾಳ ಮೋಕ್ಷ ಮಾಡಿದ್ದಾರೆ.
ಗೃಹ ಸಚಿವರನ್ನು ಭೇಟಿಯಾಗಲು ಪೊಲೀಸ್ ಆಕಾಂಕ್ಷಿಗಳು ಯತ್ನಿಸಿದ್ದು, ಈ ವೇಳೆ ಪೊಲೀಸರು ಮತ್ತು ಪೊಲೀಸ್ ಆಕಾಂಕ್ಷಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿದ್ದ ಡಿವೈಎಸ್ಪಿ ಶ್ರೀನಿವಾಸ್ ಪೊಲೀಸ್ ಆಕಾಂಕ್ಷಿಯೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಗೃಹ ಸಚಿವರಿದ್ದ ವೇದಿಕೆಯಲ್ಲೇ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ವಯೋಮಿತಿ ಹೆಚ್ಚಿಸುವಂತೆ ಉತ್ತರ ಕರ್ನಾಟಕ ಭಾಗದ ಯುವಕರು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಡಿವೈಎಸ್ಪಿ ಯುವಕರನ್ನು ತಡೆದು ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು.@JnanendraAraga ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ?
ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ.
— Karnataka Congress (@INCKarnataka) November 1, 2022
ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು.@JnanendraAraga ಅವರೇ, ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ?
ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ. pic.twitter.com/Xls7y2sVYD
— Karnataka Congress (@INCKarnataka) November 1, 2022