ಬೆಂಗಳೂರು : ಇಂದು ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಪುನೀತ್ ನೆನೆದು ಭಾವುಕರಾಗಿದ್ದಾರೆ.ಈ ವೇಳೆ ಮಾತನಾಡಿದ ರಾಘವೇಂದ್ರ ರಾಜ್ಕುಮಾರ್, 1992ರಲ್ಲಿ ಅಪ್ಪಾಜಿಗೆ ( ಡಾ.ರಾಜ್ ಕುಮಾರ್ ) ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗಿತ್ತು . ಆ ಕಾರ್ಯಕ್ರಮಕ್ಕೆ ಅಪ್ಪಾಜಿ ನನ್ನನ್ನು ಕರೆದುಕೊಂಡು ಬಂದಿದ್ರು. ಈಗ ನನ್ನ ತಮ್ಮ ನನ್ನನ್ನು ಕರೆದುಕೊಂಡು ಬಂದಿದ್ದಾನೆ ಎಂದ ವೇದಿಕೆಯಲ್ಲೇ ಅಪ್ಪು ಭಾವುಕರಾದರು.
ಸಮಾಜಕ್ಕೆ ಉತ್ತಮ ಸಂದೇಶ ನೀಡುವುದಕ್ಕಾಗಿಯೇ ಗಂಧದ ಗುಡಿ ಸಿನಿಮಾ ನಿರ್ಮಾಣ ಮಾಡಲಾಗಿದೆ. ಕಾಡು., ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ನನ್ನ ತಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ, ಎಲ್ಲರೂ ಸಿನಿಮಾ ನೋಡಿ… ಅಭಿಮಾನಿಗಳಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳು ಎಂದಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಮ್ಮ ಕುಟುಂಬಕ್ಕೆ ಆತ್ಮೀಯರು. ಅವರು ಮತ್ತು ಅವರು ಸರಕಾರ ಪುನೀತ್ ಅವರಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಹಾಗಾಗಿ ಎಲ್ಲರಿಗೂ ನಮ್ಮ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Rajkumar ) ಈ ಪ್ರಶಸ್ತಿಯನ್ನು ಸ್ವೀಕರಿಸಿ, ಭಾವುಕರಾದರು.
ಖಾತೆಯಿಂದ ಹಣ ಕಡಿತಗೊಳಿಸದೇ ‘ಮೂರು ಪಟ್ಟು ಹೆಚ್ಚು ಹಣ’ ಕೊಟ್ಟ ಎಟಿಎಂ, ವಿತ್ ಡ್ರಾಗೆ ಮುಗಿಬಿದ್ದ ಜನ
BIGG NEWS : ‘ಅಪ್ಪು’ ಕಾರ್ಯಕ್ರಮ ಮುಗಿಸಿ ಚೆನ್ನೈನತ್ತ ‘ಸೂಪರ್ ಸ್ಟಾರ್’ ರಜನೀಕಾಂತ್ ಪ್ರಯಾಣ