ಬೆಂಗಳೂರು : ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ರಾಜ್ಯ ಸರ್ಕಾರದಿಂದ ಕಾರ್ಯಕ್ರಮ ಜಾರಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಘೋಷಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ಮಂಗಳವಾರ ನಡೆದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈ ಕುರಿತು ಮಾತನಾಡಿದ್ದಾರೆ.
ರಾಜ್ಯದ ದ ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಇದೇ ವರ್ಷದಿಂದ ಜಾರಿ ಮಾಡಲಾಗುವುದು” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
“ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃ ಭಾಷೆ ಕಲಿಕೆಗೆ ಆದ್ಯತೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕೆಲ ರಾಜ್ಯಗಳಲ್ಲಿ ಈಗಾಗಲೇ ಮಾತೃಭಾಷೆಯಲ್ಲಿ ಕಲಿಯಲು ಅವಕಾಶ ನೀಡಲಾಗಿದೆ. ಹಾಗೆಯೇ ಬ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ರಾಜ್ಯ ಸರ್ಕಾರದಿಂದ ಕಾರ್ಯಕ್ರಮ ಜಾರಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಘೋಷಿಸಿದರು. ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಜಗತ್ತಿನಲ್ಲಿ ಆರೂವರೆ ಸಾವಿರ ಭಾಷೆಗಳಲ್ಲಿ ಕನ್ನಡ 27ನೇ ಸ್ಥಾನದಲ್ಲಿದೆ ಎನ್ನಲಾಗುತ್ತದೆ. ವಿಶ್ವ ಲಿಪಿಗಳ ರಾಣಿ ಎಂದು ಕನ್ನಡದ ಲಿಪಿಯನ್ನು ಬಣ್ಣಿಸಲಾಗಿದೆ ಎಂದರು.
67 ಸಾಧಕರಿಗೆ ಪ್ರಶಸ್ತಿ
2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಸಾಧಕರಿಗೆ ರಾಜ್ಯ ಸರ್ಕಾರ ಇಂದು ಪ್ರದಾನ ಮಾಡಿದೆ. ನವೆಂಬರ್ 1 ರಾಜ್ಯೋತ್ಸವದ ಹಿನ್ನೆಲೆ ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ67 ಮಂದಿ ಸಾಧಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.
ಇಸ್ರೋ ಮಾಜಿ ನಿರ್ದೆಶಕ ಶಿವನ್, ಸಾಹಿತಿ ಆ.ರಾ. ಮಿತ್ರ, ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನ್ ಗೋಪಾಲ್, ಶಿಕ್ಷಣ ತಜ್ಞ ಸುಬ್ಬರಾವ್ ಶೆಟ್ಟಿ ಸೇರಿ 67 ಮಂದಿ ಸಾಧಿಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿದ್ದು, ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರಿಗೆ 2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಈ ವೇಳೆ ಕನ್ನಡ ಮತ್ತು ಸಂಸ್ಕ್ರತಿ ಸಚಿವ ಸುನೀಲ್ ಕುಮಾರ್ ಮತ್ತಿತರರಿದ್ದರು.
Good News ; ಉದ್ಯೋಗಿಗಳಿಗೆ ಸಿಹಿ ಸುದ್ದಿ ; 10 ಕೋಟಿ ಜನರ ವ್ಯಾಪ್ತಿ ಹೆಚ್ಚಳಕ್ಕೆ ‘EPFO’ ತಯಾರಿ