ಖಾಂಡ್ವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕಬ್ಬಿನ ಗದ್ದೆಗೆ ಎಸೆದು ಹೋಗಿರುವ ಘಟನೆ ನಡೆದಿದೆ.
ಸೋಮವಾರ ಮೈದಾನದ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಆಕೆ ಇಂದೋರ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಜಸ್ವಾಡಿಯಲ್ಲಿರುವ ತನ್ನ ಸಂಬಂಧಿಕರ ಮನೆಯಿಂದ ಬಾಲಕಿ ಕಾಣೆಯಾಗಿದ್ದಾಳೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ನಂತ್ರ ಬಾಲಕಿಗಾಗಿ ಹುಡುಕಾಟ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ, ಪೊಲೀಸರು ಪ್ರದೇಶದ ಉಪಾಹಾರ ಗೃಹದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯ ಮೇಲೆ ಅನುಮಾನಗೊಂಡರು. ಈತ ಭಾನುವಾರ ರಾತ್ರಿ ಸಂತ್ರಸ್ತೆಯ ಕುಟುಂಬಸ್ಥರಿಗೆ ಬೆಡ್ ಶೀಟ್ ಖರೀದಿಸುವಂತೆ ಒತ್ತಾಯಿಸಿದ್ದನು. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ ವೇಳೆ ಆರೋಪಿ ಬಾಲಕಿಯನ್ನು ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಂತ್ರ ನಾಪತ್ತೆಯಾದ ಮಗು ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಾಲಕಿಯನ್ನು ಆರಂಭದಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ನಂತರ ಚಿಕಿತ್ಸೆಗಾಗಿ ಇಂದೋರ್ಗೆ ಸ್ಥಳಾಂತರಿಸಲಾಯಿತು.
ಆರೋಪಿಗಳು ಬಾಲಕಿ ಮಲಗಿದ್ದಾಗ ಆಕೆಯನ್ನು ಅಪಹರಿಸಿ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಪೊದೆಗೆ ಎಸೆದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ಆರೋಪಿ ವಿರುದ್ಧ ಕೇಸ್ ದಾಖಲಾಗಿದ್ದು, ಪೊಲೀಸರ ವಶದಲ್ಲಿದ್ದಾನೆ.
BIG NEWS: ಇಂದು ʻಇನ್ವೆಸ್ಟ್ ಕರ್ನಾಟಕ 2022ʼ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
BIG NEWS: ಈಗ ʻಟ್ವಿಟ್ಟರ್ʼ ಬ್ಲೂ ಟಿಕ್ಗೆ ತಿಂಗಳಿಗೆ 20 ಅಲ್ಲ, 8 ಡಾಲರ್: ಎಲಾನ್ ಮಸ್ಕ್ ಘೋಷಣೆ