ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಸಾಲದ ರೂಪದಲ್ಲಿ 1.3 ಕೋಟಿ ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಅದು ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಇದೀಗ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದೂರು ನೀಡಿದ್ದಾರೆ.
ಇನ್ನು ಕಿಂಗ್ಸ್ ಕೋರ್ಟ್ ಎಲ್ ವಿವೇಕಾನಂದರಿಂದ 1.3 ಕೋಟಿ ಚೆಕ್ ಮೂಲಕ ಹಣ ಪಡೆದಿರುವುದನ್ನ ಎನ್ ಆರ್ ರಮೇಶ್ ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ.ಬೆಂಗಳೂರು ಟರ್ಫ್ ಕ್ಲಬ್ ಉತ್ಸುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ನೇಮಕವಾಗಿದರು.
3 ವರ್ಷದ ಅವಧಿಗೆ ನೇಮಕಮಾಡಿ ಆದೇಶವನ್ನ ಸಿದ್ದರಾಮಯ್ಯ ಮಾಡಿದರು.ಲೋಕಾಯುಕ್ತ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ವಿವೇಕ್ ರಿಂದ ಸಾಲ ಪಡೆದಿದ್ದಾಗಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಇಲಾಖೆ ನಿಯಮದ ಪ್ರಕಾರ ಹುದ್ದೆ ನೀಡಿ ಉಡುಗೊರೆ, ಚೆಕ್ ಪಡೆಯುವಂತಿಲ್ಲ.ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7,8,9,10,13 ಅಡಿ ದುಡ್ಡು ಪಡೆದಿರೋದು ಶಿಕ್ಷಾರ್ಹ ಅಪರಾಧವಾಗಿದೆ.ಈ ಬಗ್ಗೆ ಎನ್ ಆರ್ ರಮೇಶ್ ಅವರು ದೂರು ನೀಡಿದ್ದಾರೆ.