ಕಲಬುರಗಿ: : ಕಲಬುರಗಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಎಳೆದೊಯ್ದು ಅತ್ಯಾಚಾರ, ಕೊಲೆ ಮಾಡಿರುವ ಘಟನೆ ನಡೆದಿದೆ. ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಈ ಘಟನೆ ನಡೆದಿದ್ದು, ಮೃತ ಬಾಲಕಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆಗೈದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಘಟನ ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಇತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.