ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬೆಳಿಗ್ಗೆ 10:30 ಕ್ಕೆ ರಾಜ್ಯದ ಜಾಗತಿಕ ಹೂಡಿಕೆದಾರರ ಸಮಾವೇಶವಾದ ಇನ್ವೆಸ್ಟ್ ಕರ್ನಾಟಕ 2022 ರ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಟೆಕ್ ಸಿಟಿ ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, “ಇದು ಸಂಪ್ರದಾಯ ಮತ್ತು ತಂತ್ರಜ್ಞಾನ ಎರಡೂ ಇರುವ ಸ್ಥಳವಾಗಿದೆ. ಇದು ಪ್ರಕೃತಿ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮವಿರುವ ಸ್ಥಳವಾಗಿದೆ. ನಾವು ಪ್ರತಿಭೆ ಮತ್ತು ತಂತ್ರಜ್ಞಾನದ ಬಗ್ಗೆ ಮಾತನಾಡುವಾಗ, ಮೊದಲು ನೆನಪಿಗೆ ಬರುವ ವಿಷಯವೆಂದರೆ ಬ್ರಾಂಡ್ ಬೆಂಗಳೂರು ಅಂತ ತಿಳಿಸಿದರು.
ನಗರದ ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಅದ್ಧೂರಿಯಾಗಿ ನಡೆಯುತ್ತಿದೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ವಿಶ್ವದ ಬಂಡವಾಳ ಹೂಡಿಕೆದಾರರಿಗೂ ನಮ್ಮ ಬೆಂಗಳೂರಿಗೆ ಸ್ವಾಗತ ಕೋರಿದ್ದಾರೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಬಹಳಷ್ಟು ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಸಂಸ್ಕೃತಿಯ ಜೊತೆಗೆ ತಂತ್ರಜ್ಞಾನವೂ ಇದೆ. ಕರ್ನಾಟಕದ ಅಪಾರ ಪ್ರಾಕೃತಿಕ ಸಂಪತ್ತು ಹೊಂದಿರುವ ರಾಜ್ಯವಾಗಿದೆ. ಇಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗುತ್ತಿದೆ. ಭಾರತದ ಅಭಿವೃದ್ಧಿಗೆ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಹೇಳಿದ್ದಾರೆ.
ಭಾರತದ ತಾಕತ್ತು ಈಗ ಇಡೀ ಜಗತ್ತಿಗೆ ಗೊತ್ತಾಗಿದೆ. ನವ ಭಾರತದ ನಿರ್ಮಾಣ ವೇಗವಾಗಿ ನಡೆಯುತ್ತಿದೆ. ಹಲವು ಅನಗತ್ಯ ಕಾನೂನುಗಳನ್ನ ತೆಗೆದುಹಾಕಲಾಗಿದೆ. ಕಾರ್ಪೋರೆಟ್ ತೆರಿಗೆ ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ದೇಶದಲ್ಲಿ ಮೂಲಭೂತ ಸೌರ್ಕರ್ಯಗಳ ಅಭಿವೃದ್ಧಿ ಪಡಿಸಲಾಗಿದೆ. ಹೋಡಿಕೆಯಿಂದ ಸಾವಿರಾರೂ ಯುವಕರಿಗೆ ಉದ್ಯೋಗ ಸಿಗಲಿದೆ. ಮಹಾಮಾರಿ ಕೊವಿಡ್ ಸಂಕಷ್ಟದಿಂದ ಇಡೀ ವಿಶ್ವವೇ ನಲುಗಿ ಹೋಗಿದೆ. ದೇಶದಲ್ಲಿ ಏರ್ ಪೋರ್ಟ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಮಟ್ರೋ ರೈಲು ವ್ಯವಸ್ಥೆ ಕೂಡ ವಿಸ್ತಾರಗೊಂಡಿದೆ. ಭಾರತದ ಅರ್ಥ ವ್ಯವಸ್ಥೆ ದಿನೇ ದಿನೇ ಸುಧಾರಣೆಯಾಗುತ್ತಿದೆ ಎಂದರು.