ಬೀದರ್: ಜಿಲ್ಲೆಯ ಮೈಲೂರು ಕ್ರಾಸ್ ಬಳಿ ಕೌಟುಂಬಿಕ ಕಲಹ ಹಿನ್ನೆಲೆ ರಸ್ತೆಯಲ್ಲಿದ್ದ ಹಾಕಿದ್ದ ಪತಿ ಹಾಗೂ ಬಿಜೆಪಿ ಮುಖಂಡ ಮಲ್ಲೇಶ್ ಬ್ಯಾನರ್ ಹರಿದು ಹಾಕಿ ಪತ್ನಿ ರಂಪಾಟ ಮಾಡಿದ ಘಟನೆ ನಡೆದಿದೆ.
ಮಲ್ಲೇಶ್ ಜನ್ಮದಿನ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಿಎಂ ಸೇರಿದಂತೆ ಸಚಿವರು ಹಾಗೂ ಬಿಜೆಪಿ ಮುಖಂಡರ ಜೊತೆ ಬ್ಯಾನರ್ ಹಾಕಲಾಗಿತ್ತು. ಆದರೆ ಮಲ್ಲೇಶ್ ಪತ್ನಿ ಸಾಧನಾ ಈ ಬ್ಯಾನರ್ ಹರಿದು ಹಾಕುವ ಮೂಲಕ ರಂಪಾಟ ನಡೆಸಿದ್ದಾರೆ.ಕಳೆದ ನಾಲ್ಕು ತಿಂಗಳ ಹಿಂದೆ ಪತಿಯ ಅನೈತಿಕ ಸಂಬಂಧದ ಬಗ್ಗೆ ಠಾಣೆಗೆ ದೂರು ನೀಡಿದ್ರು. ಪೊಲೀಸರು ಎಫ್ಐಆರ್ ದಾಖಲಿಸದ ಕಾರಣ ಇಂದು ಸಾವಿರ ಮೀಟರ್ ಉದ್ದದ ಕನ್ನಡ ಬಾವುಟ ಮೆರವಣಿಗೆ ವೇಳೆ ಪತಿಯ ಬ್ಯಾನರ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಮಹಿಳೆಯ ನಡುವೆ ಮಾತಿನ ಚಕಮಕಿಯಾಗಿದ್ದು, ಮಹಿಳೆಯ ಸಮಾಧಾನ ಪಡಿಸಲು ಪೊಲೀಸರು ಹರಸಾಹಸ ಪಟ್ಟರು.ಬಿಜೆಪಿ ಮುಖಂಡ ಸೂರ್ಯಕಾಂತ್ ನಾಗಮಾರಪ್ಪಳ್ಳಿ ಹಾಗೂ ಶಿವಶರಣಪ್ಪ ವಾಲಿ ಮುಂದೆ ನ್ಯಾಯಕ್ಕಾಗಿ ಮಹಿಳೆ ಕಣ್ಣೀರು ಹಾಕಿದ ಪ್ರಸಂಗವು ಈ ವೇಳೆ ನಡೆಯಿತು.