ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಪುಂಡಾಟ ಮೆರೆದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಗ್ರಾ.ಪಂ ಅಧ್ಯಕ್ಷ ಮಂಜುನಾಥ ಮೊಖಾಶಿ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆ ಉಳವಿ ಗ್ರಾಮದ ನಿವಾಸಿಯಾಗಿರುವ ಮುಜಾಹಿದ್ ಆಜಾದ್ ಸಯ್ಯದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತೂಗುಸೇತುವೆ ಮೇಲೆ ಕಾರು ಚಲಾಯಿಸಿ ಪುಂಡಾಟ ಮೆರೆದ ಮುಜಾಹಿದ್ ವಿರುದ್ಧ ಕಲಂ 279,336 ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜೋಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನೆಲೆ
ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಪುಂಡಾಟ ಮೆರೆಯಲಾಗಿತ್ತು.
ಜನರು ಓಡಾಡುವ ತೂಗು ಸೇತುವೆಯಲ್ಲಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದಕ್ಕೆ ಸ್ಥಳೀಯರು ಆಕ್ಷೇಪಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ. ಸೇತುವೆಯಲ್ಲಿ ಸಾಗಿ ಬಹುದೂರ ಬಂದಿದ್ದ ಕಾರನ್ನು ಸ್ಥಳೀಯರು ತಡೆದು, ಬಂದ ದಾರಿಗೆ ಹಿಂದಕ್ಕೆ ಕಳುಹಿಸಿದ್ದರು.
ಕಾರು ಚಲಾಯಿಸಿ ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಪ್ರವಾಸಿಗರನ್ನು ಸ್ಥಳೀಯರು ಪ್ರಶ್ನಿಸಿದ್ದಾರೆ. ಗುಜರಾತ್ನ ಮೊರ್ಬಿ ಯಲ್ಲಿ ತೂಗುಸೇತುವೆ ಕುಸಿದು ನೂರಾರು ಜನ ಮೃತಪಟ್ಟ ಘಟನೆ ಮುಂದಿರುವಾಗಲೇ ಕೆಲವರು ಎಚ್ಚೆತ್ತುಕೊಳ್ಳದೇ ಇರುವುದು ದುರಂತವಾಗಿದೆ. ಪ್ರಸಿದ್ಧ ಯಾತ್ರಾಸ್ಥಳ ಜೊಯಿಡಾ ತಾಲೂಕಿನ ಉಳವಿಯಿಂದ ಬರುವ ಅನೇಕ ಮಂದಿ ಶಿವಪುರದ ತೂಗು ಸೇತುವೆಗೆ ಭೇಟಿ ನೀಡುತ್ತಾರೆ. ಅಲ್ಲಿನ ಪ್ರಾಕೃತಿಕ ಸೌಂದರ್ಯದ ಕಾರಣ ಪ್ರವಾಸಿ ತಾಣವಾಗಿಯೂ ಮಾರ್ಪಟ್ಟಿದೆ. ಹಲವು ಗ್ರಾಮಸ್ಥರಿಗೆ ಈ ತೂಗು ಸೇತುವೆ ದೈನಂದಿನ ಜೀವನದ ಅಗತ್ಯ ಸೌಕರ್ಯವಾಗಿದೆ.
ICC Rankings ; ‘ವಿಶ್ವದ ನಂ.1 ಟಿ20 ಬ್ಯಾಟ್ಸ್ ಮ್ಯಾನ್’ ಆಗಿ ಹೊರಹೊಮ್ಮಿದ ‘ಸೂರ್ಯಕುಮಾರ್ ಯಾದವ್’
ಚೆಕ್ಕಿಂಗ್ ಇನ್ಸ್ಪೆಕ್ಟರ್ ಕಂಡು ಕಂಡಕ್ಟರ್ ಗೆ ‘ಹಾರ್ಟ್ ಅಟ್ಯಾಕ್’ : ಬಸ್ ನಲ್ಲೇ ಹೋಯ್ತು ಪ್ರಾಣ