ಬೆಂಗಳೂರು : ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಕೈ ನಾಯಕರ ತಯಾರಿ ಜೋರಾಗಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ, ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ‘ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ, ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ 5 ಸಾವಿರ ಕೊಟ್ಟು ಅರ್ಜಿ ಪಡೆಯಬಹುದು, ಅರ್ಜಿ ಜೊತೆ 2 ಲಕ್ಷ ಡಿಡಿ ಶುಲ್ಕ ನೀಡಬೇಕು. ಎಸ್ ಸಿ ಹಾಗೂ ಎಸ್ ಟಿ ಗೆ 1 ಲಕ್ಷ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಯಾರಿಗೆ ಟಿಕೆಟ್ ಬೇಕೋ ಅವರು ಅರ್ಜಿ ಸಲ್ಲಿಸಬಹುದು, ವಲಸೆ ಹೋದವರಿಗೆ ಮುಕ್ತ ಆಹ್ವಾನವಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಅರ್ಜಿ ಜೊತೆಯಲ್ಲಿ 2 ಲಕ್ಷ ರೂ. ಡಿಡಿ ಶುಲ್ಕ ನೀಡಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳು 1 ಲಕ್ಷ ರೂ. ಡಿಡಿ ಮೂಲಕ ಅರ್ಜಿ ಸಲ್ಲಿಸಬೇಕು. ಯಾರು ಕಾಂಗ್ರೆಸ್ ಟಿಕೆಟ್ ಬಯಸುತ್ತಾರೋ ಅವರು ಅರ್ಜಿ ಹಾಕಬಹುದು. ನಾನು ಸ್ಪರ್ಧಿಸಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಬೇಕು. ಕಾಂಗ್ರೆಸ್ ಟಿಕೆಟ್ಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು. ವಲಸೆ ಹೋದವರಿಗೂ ಮುಕ್ತ ಆಹ್ವಾನ ಎಂದು ಹೇಳುವ ಮೂಲಕ ಈಗಾಗಲೇ ಕಾಂಗ್ರೆಸ್ ಬಿಟ್ಟು ಬೇರೆ-ಬೇರೆ ಪಕ್ಷಗಳಿಗೆ ಹೋಗಿರುವ ನಾಯಕರಿಗೂ ವಾಪಸ್ ಪಕ್ಷಕ್ಕೆ ಬರುವಂತೆ ಪರೋಕ್ಷವಾಗಿ ಆಹ್ವಾನ ಕೊಟ್ಟಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳು ಮಾತ್ರ ಬಾಕಿ ಇದ್ದು,. ಒಂದು ಕ್ಷೇತ್ರದಲ್ಲಿ ಎರಡ್ಮೂರು ಟಿಕೆಟ್ ಆಕಾಂಕ್ಷಿ ಇರುವುದರಿಂದ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿದೆ.
ದೀಪಾವಳಿಗೆ ಪತ್ರಕರ್ತರಿಗೆ ಗಿಫ್ಟ್ ಕೊಡೋದು ಕಾಮನ್, ಅದರಲ್ಲಿ ಹಣ ಇಟ್ಟಿರೋದು ಸಿಎಂಗೆ ಗೊತ್ತಿಲ್ಲ – ಸಚಿವ ಆರ್ ಅಶೋಕ್