ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಇದಕ್ಕೆ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣ ತನಿಖೆ ನಡೆದು ಸತ್ಯಾಂಶ ಹೊರಬರಲಿ ಎಂದು ಹೇಳಿದ್ದಾರೆ.
BIGG NEWS: ಯೂಟ್ಯೂಬ್ನಲ್ಲಿ ವೀಡಿಯೋ ನೋಡಿ ATM ಕಳ್ಳತನಕ್ಕೆ ಯತ್ನಿಸಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್
ನಗರದಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಬರುವುದು ಸಹಜ. ಆದರೆ, ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.
ಬಿಜೆಪಿಯವರು ಹಿಂದುಳಿದ ವರ್ಗದವರನ್ನು ಸಿಎಂ ಮಾಡಲಿ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್ವೈ, ನಮ್ಮ ಪ್ರಧಾನಿಯೇ ಹಿಂದುಳಿದ ವರ್ಗದವರು. ಹಿಂದುಳಿದ ವರ್ಗದ ಅನೇಕ ಮಂದಿ ವಿವಿಧ ರಾಜ್ಯಗಳಲ್ಲಿ ಸಿಎಂ ಆಗಿದ್ದಾರೆ. ದೇಶದ ಎರಡು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಸಿದ್ದರಾಮಯ್ಯನವರು ಹೀಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.