ಕ್ಯಾನ್ಬೆರಾ: 2018ರಲ್ಲಿ 24 ವರ್ಷದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪ್ರಜೆಯ ಇರುವಿಕೆಯ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ (633,000 ಅಮೆರಿಕನ್ ಡಾಲರ್) ಬಹುಮಾನ ನೀಡುವುದಾಗಿ ಆಸ್ಟ್ರೇಲಿಯಾ ಪೊಲೀಸರು ತಿಳಿಸಿದ್ದಾರೆ.
38 ವರ್ಷದ ರಾಜ್ವಿಂದರ್ ಸಿಂಗ್ ತೋಯಾ ಕಾರ್ಡಿಂಗ್ಲೆಯನ್ನು ಕೊಂದಿದ್ದಾನೆ ಎಂದು ಶಂಕಿಸಲಾಗಿದ್ದು, ಕ್ವೀನ್ಸ್ಲ್ಯಾಂಡ್ನಲ್ಲಿ ವಾಸಿಸುತ್ತಿದ್ದು, ಮೂಲತಃ ಭಾರತದ ಪಂಜಾಬ್ನ ಬುಟ್ಟಾರ್ ಕಲಾನ್ ಮೂಲದವನು.
ಭಾರತದ ಹೈಕಮಿಷನ್ ಹೇಳಿಕೆಯ ಪ್ರಕಾರ, ನವದೆಹಲಿಯಲ್ಲಿರುವ ಆಸ್ಟ್ರೇಲಿಯಾದ ಫೆಡರಲ್ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದೊಂದಿಗೆ ಕೆಲಸ ಮಾಡುತ್ತಿದ್ದಾರೆ. ಕ್ವೀನ್ಸ್ಲ್ಯಾಂಡ್ ಸರ್ಕಾರವು ನೀಡುವ ಬಹುಮಾನವು ರಾಜ್ವಿಂದರ್ ಸಿಂಗ್ ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಭಾರತೀಯ ಅಧಿಕಾರಿಗಳು ಮಾಡುವ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎನ್ನಲಾಗಿದೆ.